ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ: ಸಹ್ಯಾದ್ರಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

ದೊಡ್ಡಬಳ್ಳಾಪುರದ ತೇರಿನ ಬೀದಿಯಲ್ಲಿ ಪ್ರಸನ್ನ ಲಕ್ಷ್ಮಿವೆಂಕಟರಮಣ ರಥೋತ್ಸವ ಫೆ.3ರ ಮಂಗಳವಾರ ಅದ್ಧೂರಿಯಾಗಿ ನಡೆಯಿತು.

ರಥೋತ್ಸವ ಅಂಗವಾಗಿ ಸಹ್ಯಾದ್ರಿ ಆಸ್ಪತ್ರೆ ವತಿಯಿಂದ ರಥೋತ್ಸವ ದಿನ ಹಾಗೂ ಇಂದು ಎರಡು ದಿನಗಳ ಕಾಲ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಜಾತ್ರೆಗ ಬಂದ ಭಕ್ತಾಧಿಗಳು, ಸಾರ್ವಜನಿಕರಿಗೆ ರಕ್ತ ಪರೀಕ್ಷೆ, ಶುಗರ್ ತಪಾಸಣೆ, ಬಿಪಿ ತಪಾಸಣೆ, ತೂಕ, ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ತಪಾಸಣೆಯನ್ನು ಮಾಡಲಾಯಿತು…

ರೋಗಲಕ್ಷಣಗಳು ಕಾಣಿಸಿಕೊಳ್ಳುವ ಮುನ್ನವೇ ಕಾಯಿಲೆಗಳನ್ನು ಗುರುತಿಸಿಕೊಳ್ಳುವುದು ಅತಿಮುಖ್ಯ. ಆದ್ದರಿಂದ ಎಲ್ಲರೂ ಆರೋಗ್ಯ ಕಾಪಾಡಿಕೊಳ್ಳುವ ಹಿತದೃಷ್ಟಿಯಿಂದ ನಿಯಮಿತವಾಗಿ ಮಾಡಿಸಿಕೊಳ್ಳುವುದು ಸೂಕ್ತ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ…

Leave a Reply

Your email address will not be published. Required fields are marked *

error: Content is protected !!