
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ ಸಂವಾದ ನಡೆಸಿ, ನೀಡಿದ ಪ್ರಮುಖ ಮಾರ್ಗದರ್ಶನಗಳು ಹಾಗೂ ಪ್ರಸ್ತುತ ರಾಜ್ಯದ ಬರ ಪರಿಸ್ಥಿತಿಯ ವಿವರಗಳು ಇಂತಿವೆ:
• ₹1 ಕೋಟಿ ಹೆಚ್ಚುವರಿ ಅನುದಾನ: ಗ್ರಾಮೀಣ ತಾಲ್ಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿ ಅನುದಾನ ಘೋಷಣೆ.
• ಬೋಗಸ್ ಬೋರ್‌ವೆಲ್‌ಗೆ ಬ್ರೇಕ್: ಹೊಸ ಬೋರ್‌ವೆಲ್ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು. ನಕಲಿ ಪ್ರಕರಣಗಳು ಕಂಡುಬಂದರೆ ಸಿಇಒಗಳೇ ನೇರ ಹೊಣೆ.
• ಕೇಂದ್ರಕ್ಕೆ ಶೀಘ್ರ ವರದಿ: ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿಯ ಸಮಗ್ರ ವರದಿ ಸಲ್ಲಿಕೆ; ಕೇಂದ್ರ ತಂಡಕ್ಕೆ ವಾಸ್ತವಾಂಶ ಮನವರಿಕೆ ಮಾಡಲು ಸೂಚನೆ.
• ರೈತರ ಹಿತರಕ್ಷಣೆಗೆ ಆದ್ಯತೆ: ಸಣ್ಣ ಮತ್ತು ಅತಿ ಸಣ್ಣ ರೈತರ ಹಿತವೇ ಮುಖ್ಯ ಆದ್ಯತೆ. ಕೃಷಿ, ಪಶುಸಂಗೋಪನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು.
• ವಿದ್ಯುತ್ ವ್ಯವಸ್ಥೆ: ಟ್ರಾನ್ಸ್‌ಫಾರ್ಮರ್‌ಗಳ ರಿಪೇರಿಗೆ ವಿಶೇಷ ಗಮನ ನೀಡಿ, ಹೆಚ್ಚುವರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು 4G ವಿನಾಯಿತಿ.
• ‘TEAM KARNATAKA’ ಮನಸ್ಥಿತಿ: ಅಧಿಕಾರಿಗಳು ಕೇವಲ ಕಾಗದದ ವರದಿ ನೀಡದೆ, ಫೀಲ್ಡ್‌ಗಿಳಿದು ಆಡಳಿತಾತ್ಮಕ ಟೀಮ್ ವರ್ಕ್ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಬೇಕು.
ರಾಜ್ಯದ ಮಳೆ ಹಾಗೂ ಜಲಮಟ್ಟದ ಪ್ರಸ್ತುತ ಅಂಕಿ-ಅಂಶಗಳು:
• ಮಳೆ ಕೊರತೆ: ಜುಲೈ 18ರವರೆಗೆ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಒಟ್ಟಾರೆ ಶೇ. 39ರಷ್ಟು ಕೊರತೆ. 170ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಅಭಾವ (ವಿಜಯನಗರ ಜಿಲ್ಲೆಯಲ್ಲಿ ಅತ್ಯಧಿಕ -67% ಕೊರತೆ).
• ಪ್ರಾದೇಶಿಕ ಕೊರತೆ: ಮಲೆನಾಡು (-43%), ಕರಾವಳಿ (-35%), ಉತ್ತರ ಒಳನಾಡು (-33%), ದಕ್ಷಿಣ ಒಳನಾಡು (-31%).
• ಜಲಾಶಯಗಳ ಸ್ಥಿತಿ: ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ. 40 ರಷ್ಟು ಮಾತ್ರ ನೀರು ಸಂಗ್ರಹವಿದೆ (ಪ್ರಸ್ತುತ 359.98 ಟಿಎಂಸಿ, ಕಳೆದ ವರ್ಷ 681.83 ಟಿಎಂಸಿ ಇತ್ತು).
• ಜಲವಿದ್ಯುತ್ ಜಲಾಶಯಗಳು: ಲಿಂಗನಮಕ್ಕಿ, ಸೂಪ ಮತ್ತು ವರಾಹಿಯಲ್ಲಿ ಕೇವಲ ಸರಾಸರಿ ಶೇ. 23 ರಷ್ಟು ಮಾತ್ರ ನೀರು ಸಂಗ್ರಹವಿದೆ. ಕಾವೇರಿ ಕಣಿವೆಯಲ್ಲಿ ಶೇ. 51 ಹಾಗೂ ಕೃಷ್ಣಾ ಕಣಿವೆಯಲ್ಲಿ ಶೇ. 48 ರಷ್ಟು ನೀರಿದೆ.
• ರೈತರ ಹಿತರಕ್ಷಣೆಗೆ ಆದ್ಯತೆ: ರೈತರು ಕಡಿಮೆ ನೀರಿನ ಬಳಕೆಯಾಗುವ ಬೆಳೆಗಳನ್ನು ಬೆಳೆಯುವ ಮೂಲಕ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಜೋಡಿಸಬೇಕು. ರೈತರ ಹಿತರಕ್ಷಣೆಗೆ ಸಕಲ ಸಿದ್ಧತೆಗಳನ್ನೂ ಮಾಡಲಾಗುವುದು.
ಈ ಸಂದರ್ಭದಲ್ಲಿ ಮಾನ್ಯ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.