ಪ್ರಸ್ತುತ ರಾಜ್ಯದ ಬರ ಪರಿಸ್ಥಿತಿಯ ವಿವರಗಳು ಇಂತಿವೆ….

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬರ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳ‌ ಜೊತೆ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಡಿಯೋ ಸಂವಾದ ನಡೆಸಿ, ನೀಡಿದ ಪ್ರಮುಖ ಮಾರ್ಗದರ್ಶನಗಳು ಹಾಗೂ ಪ್ರಸ್ತುತ ರಾಜ್ಯದ ಬರ ಪರಿಸ್ಥಿತಿಯ ವಿವರಗಳು ಇಂತಿವೆ:

• ₹1 ಕೋಟಿ ಹೆಚ್ಚುವರಿ ಅನುದಾನ: ಗ್ರಾಮೀಣ ತಾಲ್ಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಹೆಚ್ಚುವರಿ ಅನುದಾನ ಘೋಷಣೆ.
• ಬೋಗಸ್ ಬೋರ್‌ವೆಲ್‌ಗೆ ಬ್ರೇಕ್: ಹೊಸ ಬೋರ್‌ವೆಲ್‌ ಕೊರೆಸುವಾಗ ಕಡ್ಡಾಯವಾಗಿ ವಿಡಿಯೋ ಚಿತ್ರೀಕರಣ ಆಗಬೇಕು. ನಕಲಿ ಪ್ರಕರಣಗಳು ಕಂಡುಬಂದರೆ ಸಿಇಒಗಳೇ ನೇರ ಹೊಣೆ.
• ಕೇಂದ್ರಕ್ಕೆ ಶೀಘ್ರ ವರದಿ: ಮುಂದಿನ 15 ದಿನಗಳಲ್ಲಿ ಕೇಂದ್ರ ಸರ್ಕಾರಕ್ಕೆ ಬರ ಪರಿಸ್ಥಿತಿಯ ಸಮಗ್ರ ವರದಿ ಸಲ್ಲಿಕೆ; ಕೇಂದ್ರ ತಂಡಕ್ಕೆ ವಾಸ್ತವಾಂಶ ಮನವರಿಕೆ ಮಾಡಲು ಸೂಚನೆ.
• ರೈತರ ಹಿತರಕ್ಷಣೆಗೆ ಆದ್ಯತೆ: ಸಣ್ಣ ಮತ್ತು ಅತಿ ಸಣ್ಣ ರೈತರ ಹಿತವೇ ಮುಖ್ಯ ಆದ್ಯತೆ. ಕೃಷಿ, ಪಶುಸಂಗೋಪನೆ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು.
• ವಿದ್ಯುತ್ ವ್ಯವಸ್ಥೆ: ಟ್ರಾನ್ಸ್‌ಫಾರ್ಮರ್‌ಗಳ ರಿಪೇರಿಗೆ ವಿಶೇಷ ಗಮನ ನೀಡಿ, ಹೆಚ್ಚುವರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು 4G ವಿನಾಯಿತಿ.
• ‘TEAM KARNATAKA’ ಮನಸ್ಥಿತಿ: ಅಧಿಕಾರಿಗಳು ಕೇವಲ ಕಾಗದದ ವರದಿ ನೀಡದೆ, ಫೀಲ್ಡ್‌ಗಿಳಿದು ಆಡಳಿತಾತ್ಮಕ ಟೀಮ್‌ ವರ್ಕ್ ಮತ್ತು ಕಾರ್ಯಕ್ಷಮತೆ ಪ್ರದರ್ಶಿಸಬೇಕು.

ರಾಜ್ಯದ ಮಳೆ ಹಾಗೂ ಜಲಮಟ್ಟದ ಪ್ರಸ್ತುತ ಅಂಕಿ-ಅಂಶಗಳು:

• ಮಳೆ ಕೊರತೆ: ಜುಲೈ 18ರವರೆಗೆ ರಾಜ್ಯದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಒಟ್ಟಾರೆ ಶೇ. 39ರಷ್ಟು ಕೊರತೆ. 170ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಮಳೆ ಅಭಾವ (ವಿಜಯನಗರ ಜಿಲ್ಲೆಯಲ್ಲಿ ಅತ್ಯಧಿಕ -67% ಕೊರತೆ).
• ಪ್ರಾದೇಶಿಕ ಕೊರತೆ: ಮಲೆನಾಡು (-43%), ಕರಾವಳಿ (-35%), ಉತ್ತರ ಒಳನಾಡು (-33%), ದಕ್ಷಿಣ ಒಳನಾಡು (-31%).
• ಜಲಾಶಯಗಳ ಸ್ಥಿತಿ: ಪ್ರಮುಖ ಜಲಾಶಯಗಳಲ್ಲಿ ಕೇವಲ ಶೇ. 40 ರಷ್ಟು ಮಾತ್ರ ನೀರು ಸಂಗ್ರಹವಿದೆ (ಪ್ರಸ್ತುತ 359.98 ಟಿಎಂಸಿ, ಕಳೆದ ವರ್ಷ 681.83 ಟಿಎಂಸಿ ಇತ್ತು).
• ಜಲವಿದ್ಯುತ್ ಜಲಾಶಯಗಳು: ಲಿಂಗನಮಕ್ಕಿ, ಸೂಪ ಮತ್ತು ವರಾಹಿಯಲ್ಲಿ ಕೇವಲ ಸರಾಸರಿ ಶೇ. 23 ರಷ್ಟು ಮಾತ್ರ ನೀರು ಸಂಗ್ರಹವಿದೆ. ಕಾವೇರಿ ಕಣಿವೆಯಲ್ಲಿ ಶೇ. 51 ಹಾಗೂ ಕೃಷ್ಣಾ ಕಣಿವೆಯಲ್ಲಿ ಶೇ. 48 ರಷ್ಟು ನೀರಿದೆ.
• ರೈತರ ಹಿತರಕ್ಷಣೆಗೆ ಆದ್ಯತೆ: ರೈತರು ಕಡಿಮೆ‌ ನೀರಿನ‌ ಬಳಕೆಯಾಗುವ ಬೆಳೆಗಳನ್ನು ಬೆಳೆಯುವ ಮೂಲಕ ಬರದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೈಜೋಡಿಸಬೇಕು. ರೈತರ ಹಿತರಕ್ಷಣೆಗೆ ಸಕಲ ಸಿದ್ಧತೆಗಳನ್ನೂ ಮಾಡಲಾಗುವುದು.‌

ಈ ಸಂದರ್ಭದಲ್ಲಿ ಮಾನ್ಯ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಕೆ.ಜೆ. ಜಾರ್ಜ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ ಅವರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

19 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

20 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago