ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ- ಸಿಎಂ ಸಿದ್ದರಾಮಯ್ಯ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಕಿದ ಹಸುವನ್ನು ಹುಲಿ ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದು ತಿಳಿಸಿದರು.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದು ಹೇಳಿದರು.

ಹುಲಿ, ಆನೆಗಳ ಹತ್ಯೆ ಅತ್ಯಂತ ಗಂಭೀರ ಅಪರಾಧಗಳು. ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದರು.

ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

1 hour ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

13 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

19 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

23 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago