ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರೀಕರಣ ಗೊಳಿಸುವಲ್ಲಿ ಹಲವು ಯೋಜನೆ ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಶಾಸಕ ಧೀರಜ್ ಮುನಿರಾಜು ಅಭಿಪ್ರಾಯಪಟ್ಟರು.
ತಾಲ್ಲೂಕಿನ ಆರೂಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಾಲಾ ಮಕ್ಕಳಿಗೆ ಪ್ರಣವ್ ಫೌಂಡೇಶನ್ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು.
ಪ್ರಾಥಮಿಕ ಶಿಕ್ಷಣ ಎಂಬುದು ಭವಿಷ್ಯದ ತಳಹದಿಯಾಗಿದೆ. ಈ ಹಂತದಲ್ಲಿ ಉತ್ತಮ ಕಲಿಕೆ ಸಾಧ್ಯವಾದರೆ ಜೀವನದಲ್ಲಿ ಶೈಕ್ಷಣಿಕ ಸಾಧನೆ ಮಾಡುವಲ್ಲಿ ಸುಲಭವಾಗುತ್ತದೆ ಎಂದು ಹೇಳಿದರು.
ಆರೂಢಿ ಗ್ರಾಪಂ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಪ್ರಸಕ್ತ ವಿದ್ಯಮಾನಗಳ ಜ್ಞಾನ ಅತ್ಯವಶ್ಯಕ. ಇಂತಹ ಜ್ಞಾನವನ್ನು ವೃದ್ಧಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ತೋರಬೇಕಿದೆ ಎಂದರು.
ಮುಖ್ಯ ಶಿಕ್ಷಕ ಅಜ್ಜಪ್ಪ ಮಾತನಾಡಿ, ಶಾಲೆ ಪ್ರಾರಂಭಕ್ಕೂ ಮುಂಚಿತವಾಗಿಯೇ ಶಿಕ್ಷಣ ಇಲಾಖೆ ಸಮವಸ್ತ್ರ ಹಾಗೂ ಪಠ್ಯಪುಸ್ತಕ ವಿತರಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿರುವುದು ಶ್ಲಾಘನೀಯವಾದುದು ಎಂದರು.
ಪ್ರಣವ್ ಫೌಂಡೇಶನ್ ಮುಖ್ಯಸ್ಥ ನಾಗರಾಜ್ ಹೆಬ್ಬಾಳ್, ಆರ್.ವಿ ಇಂಜಿನಿಯರಿಂಗ್ ಕಾಲೇಜು ಡೀನ್ ಡಾ. ಉಮಾ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಯಾರಿಗೂ ಕಡಿಮೆ ಇಲ್ಲದಂತೆ ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವುದು ಒಳಿತು ಎಂದು ಹೇಳಿದರು.
ಎಸ್‌ಡಿಎಂಸಿ ಅಧ್ಯಕ್ಷ ರೇಣುಗೋಪಾಲ್ ಮಾತನಾಡಿ, ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಈ ಭಾಗದ ಸರ್ಕಾರಿ ಶಾಲೆಗಳ ಸಮಸ್ಯೆ ಬಗೆಹರಿಸಲು ಸಹಕರಿಸಬೇಕು ಎಂದು ಕೋರಿದರು.
ಈ ವೇಳೆ ದೊ.ಯೋ.ಪ್ರಾಧಿಕಾರ ಮಾಜಿ ನಿರ್ದೇಶಕ ಆನಂದ್ ಮೂರ್ತಿ, ಪ್ರಣವ್ ಫೌಂಡೇಶನ್ ಟ್ರಸ್ಟಿ ನೇತ್ರಾ, ಎನ್ಎಸ್ಎಸ್ ಶಿಕ್ಷಕಿ ಡಾ.ಎಂ ಲೋಕೇಶ್ವರಿ ಸೇರಿದಂತೆ ಇತರರು ಇದ್ದರು.
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…