ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ- ಸಿಇಒ ಡಾ.ಕೆ.ಎನ್ ಅನುರಾಧ

ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ವಿಷೇಶ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯನ್ನು ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಕ್ಷಯರೋಗಿಗಳ ಪತ್ತೆ ಹಚ್ಚಿ, ಸೂಕ್ತ ಚಿಕಿತ್ಸೆ ನೀಡುವಲ್ಲಿ ಕಾರ್ಯಪ್ರವ್ರತ್ತರಾಗಿದ್ದು, ಡಿಸೆಂಬರ್ 07 ರಿಂದ 2025 ರ ಮಾರ್ಚ್ 17 ವರೆಗೆ ಜಿಲ್ಲೆಯಾದ್ಯಂತ 100 ದಿನಗಳ ಆಂದೋಲನ ಹಮ್ಮಿಕೊಳ್ಳಲಾಗಿದೆ.

ಈ ಆಂದೋಲನಕ್ಕೆ ಚುನಾಯಿತ ಜನ ಪ್ರತಿನಿಧಿಗಳ, ಟಿ.ಬಿ.ಚಾಂಪಿಯನ್ಸ್,(ಕ್ಷಯರೋಗದಿಂದ ಗುಣಹೊಂದಿರುವವರು) ನಿಕ್ಷಯ್ ಮಿತ್ರ(ಸ್ಥಳೀಯವಾಗಿ ಕ್ಷಯರೋಗಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ದಾನಿಗಳು), ಖಾಸಗಿ ಆರೋಗ್ಯ ಸಂಸ್ಥೆಗಳು, ಪಂಚಾಯತ್ ರಾಜ್ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದ ಜೊತೆಗೆ ಆರೋಗ್ಯ ಸಿಬ್ಬಂದಿ ತಪಾಸಣೆಗಾಗಿ ಮನೆಗೆ ಬಂದಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ಸಿ.ಇ.ಒ ಮನವಿ ಮಾಡಿದರು.

ಪ್ರಸ್ತುತ ದಿನಮಾನಗಳ ಕ್ಷಯರೋಗಕ್ಕೂ ಸೂಕ್ತ ಚಿಕಿತ್ಸೆ ಇದ್ದು, ಸಕಾಲದಲ್ಲಿ ಔಷದೋಪಚಾರ ಪಡೆದುಕೊಂಡು ಆರೋಗ್ಯವಂತರಾಗಬೇಕು. 2023-24 ರಲ್ಲಿ 8 ಗ್ರಾಮ ಪಂಚಾಯತಿಗಳನ್ನು ‘’ಕ್ಷಯಮುಕ್ತ ಗ್ರಾಮ ಪಂಚಾಯತಿ’’ ಎಂದು ಘೋಷಿಸಲಾಗಿದೆ. ಪ್ರಸಕ್ತ 2024-25 ನೇ ಸಾಲಿನಲ್ಲಿ 40 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಮಾನದಂಡಗಳ ಅನ್ವಯ ಕಾರ್ಯರಂಭ ಮಾಡಲಾಗಿದೆ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನೆ ಅಧಿಕಾರಿ ಡಾ. ನಾಗೇಶ್.ಎಸ್ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರತಿವರ್ಷ ಸುಮಾರು 35000 ಸಂಭಾವ್ಯ ಕ್ಷಯರೋಗಿಗಳ ತಪಾಸಣೆಗೊಳಪಡಿಸಲಾಗುತ್ತಿದೆ. ಇದರಲ್ಲಿ 800 ರಿಂದ 900 ಹೊಸ ಕ್ಷಯರೋಗ ಪ್ರಕರಣಗಳು ದಾಖಲಾಗುತ್ತಿವೆ.

1400-1500 ಕ್ಷಯರೋಗ ಸಂಪರ್ಕಿತರಿಗೆ ಸೋಂಕಿನ ತಪಾಸಣೆ ಮಾಡಲಾಗುತ್ತಿದೆ. ಈ ರೋಗ ಬಾದಿತರಲ್ಲಿ ಶೇ. 86% ರೋಗಿಗಳನ್ನು ಪರಿಣಾಮಕಾರಿ ಚಿಕಿತ್ಸಾ ಆರೈಕೆಗಳೊಂದಿಗೆ ಗುಣಪಡಿಸಲಾಗುತ್ತಿದೆ. 2015 ನೇ ಇಸವಿಯಿಂದ ಕ್ಷಯರೋಗ ಪ್ರಕರಣಗಳು ಕ್ರಮೇಣವಾಗಿ ಪ್ರತಿ ಲಕ್ಷ ಜನರಲ್ಲಿ 237 ರಿಂದ 80 ಕ್ಷಯರೋಗ ಪ್ರಕರಣಗಳು ಇಳಿಮುಖವಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ ಹೆಚ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ ಸುನೀಲಕುಮಾರ, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

1 hour ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

2 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

21 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

1 day ago