ಪ್ರಾಪರ್ಟಿ ಪರೇಡ್: ನಾಲ್ಕು ಜನ ಮೊಬೈಲ್ ಕಳ್ಳರಿಂದ 1037 ಮೊಬೈಲ್ ಗಳನ್ನು ವಶ

ಮೊಬೈಲ್ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಬನ್ನೇರುಘಟ್ಟ ಪೊಲೀಸರು, ಬೆಂಗಳೂರಿನ ಮಹಮ್ಮದ್‌ ಪಾಷಾ, ಮಹಮ್ಮದ್‌ ಉಮರ್‌, ಐಯಾನ್‌, ಮಹಮ್ಮದ್ ಸಲೀಂ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿ, ಬೆಲೆ‌ ಬಾಳುವ ವಿವಿಧ ಕಂಪನಿಗಳ 1,037 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಮೆಜೆಸ್ಟಿಕ್‌, ಶಿವಾಜಿನಗರ, ಎಂ.ಜಿ.ರೋಡ್‌ ಮತ್ತಿತರ ಜನದಟ್ಟಣೆ ಪ್ರದೇಶಗಳಲ್ಲಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಕದ್ದ ಮೊಬೈಲ್ ಗಳನ್ನು ಕಳ್ಳರ ಗುಂಪು, ಆರೋಪಿ ಮಹಮದ್‌ ಪಾಷಾನಿಗೆ ನೀಡುತ್ತಿತ್ತು. ಕದ್ದು ತಂದ ಮೊಬೈಲ್ ಗಳಿಗೆ ಆರೋಪಿಯು 2 ರಿಂದ 3 ಸಾವಿರ ಹಣ ನೀಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಬನ್ನೇರುಘಟ್ಟದ ಎಎಂಸಿ ಕಾಲೇಜು ಬಳಿ ಕದ್ದ ಮೊಬೈಲ್‌ಗಳನ್ನು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಿಜಾಂಶ ಬಯಲಾಗಿದೆ.

ಕಳವು ಮಾಡಿದ ಮೊಬೈಲ್‌ಗಳನ್ನು ಬೆಂಗಳೂರಿನ ಹೆಗಡೆನಗರದ ಬಾಡಿಗೆ ಮನೆಯಲ್ಲಿ ಸಂಗ್ರಹಿಸಿಟ್ಟು ಚೆನ್ನೈ, ಕೇರಳದ ಮಂಜೇರಿಗೆ ಖಾಸಗಿ ಬಸ್‌ಗಳಲ್ಲಿ ಪಾರ್ಸಲ್‌ ಕಳುಹಿಸಿ ಮಾರಾಟ ಮಾಡುತ್ತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ಐಜಿಪಿ ಡಾ.ಬಿ.ಆರ್.ರವಿಕಾಂತೇಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಎಎಸ್ಪಿ ಪುರುಷೋತ್ತಮ್ ನೇತೃತ್ವದಲ್ಲಿ ಪ್ರಾಪರ್ಟಿ ಪರೇಡ್ ನಡೆಯಿತು.

ನಾಲ್ಕು ಜನ ಮೊಬೈಲ್ ಕಳ್ಳರನ್ನು ದಸ್ತಗಿರಿ ಮಾಡಿ ಅವರಿಂದ 1037 ಮೊಬೈಲ್ ಗಳನ್ನು ವಶಪಡಿಸಿಕೊಂಡಿರುವ ಪೊಲೀಸ್ ಇನ್ಸ್ ಪೆಕ್ಟರ್, ಕ್ರೈಂ ಸಿಬ್ಬಂದಿಯ ಕಾರ್ಯವನ್ನು ಗುರುತಿಸಿ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.

ಈ ವೇಳೆ ಆನೇಕಲ್ ವಿಭಾಗದ ಡಿಸಿಪಿ, ಬನ್ನೇರುಘಟ್ಟ ಪೊಲೀಸ್ ಇನ್ಸ್ ಪೆಕ್ಟರ್, ಕ್ರೈಂ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago