Categories: Home

ಪ್ರಾಪರ್ಟಿ ಪೇರೆಡ್: 22 ಪ್ರಕರಣ: 40ಮಂದಿ ಕಳ್ಳರಿಂದ 1,17,91,400 ರೂ. ಮೌಲ್ಯದ 41ಬೈಕ್, 21ಮೊಬೈಲ್ ಮತ್ತು 1435 ಗ್ರಾಂ ಚಿನ್ನಾಭರಣ ವಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 22 ವಿವಿಧ ಪ್ರಕರಣಗಳಲ್ಲಿ 40 ಜನ ಕಳ್ಳರನ್ನು ದಸ್ತಗಿರಿ ಮಾಡಿ ಅವರಿಂದ 1,17,91,400 ರೂ. ಮೌಲ್ಯದ 41ಬೈಕ್, 21ಮೊಬೈಲ್ ಮತ್ತು 1435 ಗ್ರಾಂ  ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿರುತ್ತಾರೆ.

ಈ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ.ಬಾಬಾ ಅವರ ನೇತೃತ್ವದಲ್ಲಿ ಪ್ರಾಪರ್ಟಿ ಪರೇಡ್ ನಡೆಯಿತು.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ ಪಾಶ ಅವರ ನೇತೃತ್ವದಲ್ಲಿ ಕಳೆದ ಮೂರು ತಿಂಗಳಿನಿಂದ ಸುಮಾರು 15 ಲಕ್ಷ ಬೆಲೆ ಬಾಳುವ 186 ಗ್ರಾಂ  ಚಿನ್ನದ ಒಡವೆಗಳು ಹಾಗೂ 3 ಲಕ್ಷ  ಬೆಲೆಬಾಳುವ 20 ಮೊಬೈಲ್ ಫೋನ್ ಗಳನ್ನು ಬೇರೆ ಬೇರೆ ಪ್ರಕರಣಗಳಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಿ ವಶಪಡಿಸಿಕೊಂಡಿರುತ್ತೆ.

ಈ ವೇಳೆ ಅಪರ ಪೊಲೀಸ್ ಅಧೀಕ್ಷಕರು, ಆನೇಕಲ್, ನೆಲಮಂಗಲ, ಹೊಸಕೋಟೆ ಮತ್ತು ದೊಡ್ಡಬಳ್ಳಾಪುರ ಉಪ ವಿಭಾಗಗಳ ಡಿ.ವೈ.ಎಸ್.ಪಿಗಳು, ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಕ್ರೈಂ ಸಿಬ್ಬಂದಿಯು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

5 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

11 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

15 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

17 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago