ನಿನ್ನೆ ರಸ್ತೆ ಅಪಘಾತದಲ್ಲಿ ವ್ಯಕ್ತಿ ಸಾವನ್ನಪ್ಪಿದ್ದ. ಮೃತನ ಬಳಿ ಇದ್ದ ಬೆಲೆ ಬಾಳುವ ವಸ್ತುಗಳನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡುವ ಮೂಲಕ 108 ಅಂಬುಲೆನ್ಸ್ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ನಿನ್ನೆ ಸಂಜೆ ಹೊಸಕೋಟೆ – ದಾಬಸ್‌ಪೇಟೆ ನಡುವಿನ ರಾಷ್ಟ್ರೀಯ ಹೆದ್ದಾರಿ ನಾಗದೇನಹಳ್ಳಿಯ ಗೀತಂ ಕಾಲೇಜ ಬಳಿಯ ಮೇಲ್ಲೇತುವೆಯಲ್ಲಿ ದೇವನಹಳ್ಳಿ ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು.
ಈ ಕುರಿತು ಮಾಹಿತಿ ತಿಳಿದ 108 ಸಿಬ್ಬಂದಿ ನರಸಿಂಹಮೂರ್ತಿ ಕೆ, ಸ್ಥಳಕ್ಕೆ ದೌಡಾಯಿಸಿ, ಬ್ಯಾಟರಾಯನಪುರ ಸಮೀಪದ ಕೆಂಪಾಪುರ ನಿವಾಸಿ ಮದನ್ (40) ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ರಸ್ತೆ ನಡುವೆ ಸಾವನಪ್ಪಿದ್ದರು.
ಇನ್ನೂ ಮೃತನ ಕುರಿತು ದಾಖಲೆ ಪರಿಶೀಲನೆ ನಡೆಸಿದ 108 ಚಾಲಕ ನರಸಿಂಹಮೂರ್ತಿ ಮೃತನ ಧರಿಸಿದ್ದ 40 ಗ್ರಾಂ ನಷ್ಟು ಚಿನ್ನ, 25 ಸಾವಿರ ಹಣ, ಮೊಬೈಲ್ ಮತ್ತು ಪರ್ಸ್ ನ್ನು ಮೃತನ ಗೆಳೆಯನಿಗೆ ಹಸ್ತಾಂತರ ಮಾಡಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಇನ್ನೂ ಮೃತನು ಯುಗಾದಿ ಹಿನ್ನೆಲೆ ನಂದಿಗಿರಿಗೆ ಭೇಟಿ ನೀಡಿದ್ದಾಗ ಅಪಘಾತ ಸಂಭವಿಸಿದೆ.
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…