ಶಿವಮೊಗ್ಗ: ಕೊಲೆ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ..
ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಆದೇಶ ಮಾಡಿದ್ದಾರೆ.
2020ರ ಜನವರಿ 15ರಂದು ಪ್ರಕಾಶ್ ಬಾಬು ಎಂಬುವವರನ್ನು ಪತ್ನಿ ಫ್ಲೋರಾ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರ ರಾಜಶೇಖರಯ್ಯ ಕೊಲೆ ಮಾಡಿದ್ದರು. ಪ್ರಕಾಶ್ ಬಾಬು ಪೇಪರ್ ಟೌನ್ ಪೊಲಿಸ್ ಠಾಣಾ ವ್ಯಾಪ್ತಿಯ ಸುರಗಿತೋಪಿನ ವಾಸಿಯಾಗಿದ್ದರು.
ಪ್ರಕಾಶ್ ಬಾಬು ಪತ್ನಿ ಫ್ಲೋರಾ ನ್ಯಾನ್ಸಿ ರಾಜಶೇಖರಯ್ಯನ ಜೊತೆ ಅನೈತಿಕ ಸಂಬಂಧ ಹೊಂದಿದ್ದರು.
ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿ ಬರುತ್ತಾನೆ ಎಂದು ಪ್ರಕಾಶ್ ಬಾಬುನನ್ನು ಪತ್ನಿ ಫ್ಲೋರಾ ನ್ಯಾನ್ಸಿ ಹಾಗೂ ಆಕೆಯ ಪ್ರಿಯಕರ ರಾಜಶೇಖರಯ್ಯ ಕೊಲೆ ಮಾಡಿದ್ದರು.
ಪ್ರಕಾಶ್ ಬಾಬುವಿಗೆ ಮತ್ತು ಬರುವ ಔಷದಿಯನ್ನು ಹಾಕಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು. ಈ ಬಗ್ಗೆ ಅಂದಿನ ಇನ್ಸ್ ಪೆಕ್ಟರ್ ಮಂಜುನಾಥ್ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಗಲ್ಲು ಶಿಕ್ಷೆ ಜೊತೆಗೆ 14 ಲಕ್ಷ ದಂಡ ವಿಧಿಸಿದೆ. ಜೊತೆಗೆ ದೂರುದಾರರಿಗೆ 5 ಲಕ್ಷ ನೀಡುವಂತೆ ಆದೇಶಿಸಲಾಗಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…