ಲವ್ ಸ್ಟೋರಿಯನ್ನು ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೋಂಗಾರ್ಡ್ ರಾಣಿ ಎಂಬಾಕೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದಾರೆ. ಸದ್ಯ ಕಾನ್ಸ್‌ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ ಸ್ಟೇಷನ್ ಮೆಟ್ಟಿಲೇರಿದೆ.
ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೋಂಗಾರ್ಡ್ ರಾಣಿ ಅವರಿಗೆ ಮದುವೆಯಾಗಿ ಮಕ್ಕಳಿದ್ದರೂ ಕಾನ್ಸ್‌ಟೇಬಲ್ ಜೊತೆ ಸ್ನೇಹ ಬೆಳೆಸಿದ್ದರು.
ಕಳೆದ ಎರಡು ದಿನದ ಹಿಂದೆ ಹೋಂಗಾರ್ಡ್ ರಾಣಿ ಅವರು ಕಾನ್ಸ್ ಟೇಬಲ್ ಸಂಜಯ್ ಅವರಿಗೆ ಕರೆ ಮಾಡಿ ತನ್ನ ಬಳಿಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದರು. ಈ ವೇಳೆ ಚೇತನ್ ಎಂಬಾತ ರಾಣಿಗೆ ಕರೆ ಮಾಡಿದ್ದ. ಚೇತನ್ ಎಂಬಾತ ಕರೆ ಮಾಡಿದಾಗ ಪಕ್ಕದಲ್ಲೇ ಇದ್ದ ಸಂಜಯ್ ಅನುಮಾನಗೊಂಡು ಆತ ಯಾರೂ ಎಂದು ಪ್ರಶ್ನೆ ಮಾಡಿದ್ದ.
ಬಳಿಕ ರಾಣಿ ಮೊಬೈಲ್ ಪಡೆದು ಚೆಕ್ ಮಾಡಿದಾಗ ಮತ್ತೋರ್ವನ ಜೊತೆ ಸಲಿಗೆಯಿಂದ ಚಾಟಿಂಗ್ ಮಾಡಿರುವುದು ಕಂಡುಬಂದಿದೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.
ಮತ್ತೋರ್ವನೊಂದಿಗೆ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ. ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕಾನ್ಸ್‌ಟೇಬಲ್ ನನ್ನ ದಾಖಲಿಸಲಾಗಿದೆ. ಸದ್ಯ ಗಾಯಾಳು ಕಾನ್ಸ್‌ಟೇಬಲ್ ಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಕುರಿತು ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…