ಲವ್ ಸ್ಟೋರಿಯನ್ನು ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೋಂಗಾರ್ಡ್ ರಾಣಿ ಎಂಬಾಕೆ ಕಾನ್ಸ್ ಟೇಬಲ್ ಸಂಜಯ್ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ್ದಾರೆ. ಸದ್ಯ ಕಾನ್ಸ್‌ಟೇಬಲ್- ಹೋಂ ಗಾರ್ಡ್ ಲವ್ ಸ್ಟೋರಿ ಸ್ಟೇಷನ್ ಮೆಟ್ಟಿಲೇರಿದೆ.
ಇಬ್ಬರೂ ಕೂಡ ಬಸವನಗುಡಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೋಂಗಾರ್ಡ್ ರಾಣಿ ಅವರಿಗೆ ಮದುವೆಯಾಗಿ ಮಕ್ಕಳಿದ್ದರೂ ಕಾನ್ಸ್‌ಟೇಬಲ್ ಜೊತೆ ಸ್ನೇಹ ಬೆಳೆಸಿದ್ದರು.
ಕಳೆದ ಎರಡು ದಿನದ ಹಿಂದೆ ಹೋಂಗಾರ್ಡ್ ರಾಣಿ ಅವರು ಕಾನ್ಸ್ ಟೇಬಲ್ ಸಂಜಯ್ ಅವರಿಗೆ ಕರೆ ಮಾಡಿ ತನ್ನ ಬಳಿಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದರು. ಈ ವೇಳೆ ಚೇತನ್ ಎಂಬಾತ ರಾಣಿಗೆ ಕರೆ ಮಾಡಿದ್ದ. ಚೇತನ್ ಎಂಬಾತ ಕರೆ ಮಾಡಿದಾಗ ಪಕ್ಕದಲ್ಲೇ ಇದ್ದ ಸಂಜಯ್ ಅನುಮಾನಗೊಂಡು ಆತ ಯಾರೂ ಎಂದು ಪ್ರಶ್ನೆ ಮಾಡಿದ್ದ.
ಬಳಿಕ ರಾಣಿ ಮೊಬೈಲ್ ಪಡೆದು ಚೆಕ್ ಮಾಡಿದಾಗ ಮತ್ತೋರ್ವನ ಜೊತೆ ಸಲಿಗೆಯಿಂದ ಚಾಟಿಂಗ್ ಮಾಡಿರುವುದು ಕಂಡುಬಂದಿದೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ.
ಮತ್ತೋರ್ವನೊಂದಿಗೆ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪ್ರಿಯತಮೆ ತನ್ನ ಪ್ರಿಯಕರನ ಮೇಲೆ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ. ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಕಾನ್ಸ್‌ಟೇಬಲ್ ನನ್ನ ದಾಖಲಿಸಲಾಗಿದೆ. ಸದ್ಯ ಗಾಯಾಳು ಕಾನ್ಸ್‌ಟೇಬಲ್ ಗೆ ವಿಕ್ಟೋರಿಯಾದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಕುರಿತು ಪುಟ್ಟೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…