ಪ್ರೀತಿಸಿದ ಪ್ರಿಯತಮೆ ಕೈಕೊಟ್ಟ ಹಿನ್ನೆಲೆ ಪ್ರಿಯತಮ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೊಡಿಗೇಹಳ್ಳಿ ಬಳಿ ನಡೆದಿದೆ.
ಕಾಳುಗಳಿಗೆ ಹಾಕುವ ಮಾತ್ರೆ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಬಾಲಾಜಿ(23), ಸಾವನಪ್ಪಿರುವ ದುರ್ದೈವಿ.
ಕಳೆದ ಒಂದು ವರ್ಷದ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿ, ಪರಿಚಯ ಪ್ರೇಮಕ್ಕೆ ತಿರುಗಿ ಇಬ್ಬರೂ ಜೊತೆಯಲ್ಲಿ ತಿರುಗಾಟ ನಡೆಸಿದ್ದರು.
ಕೆಲ ದಿನಗಳ ಹಿಂದೆ ಪ್ರಿತಿಸಿದ ಹುಡುಗಿ ಪ್ರೀತಿ ನಿರಾಕರಿಸಿದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಬಾಲಾಜಿ ಖಾಸಗಿ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದನು ಎಂದು ಸಂಬಂಧಿಕರು ತಿಳಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡಿದಿದೆ.