ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ 27 ವರ್ಷದ ಯುವಕ ಮಂಜುನಾಥ್ ಪ್ರೀತಿ ವೈಫಲ್ಯದಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮಂಜುನಾಥ್ ತನ್ನ ಸೋದರ ಮಾವನ ಅಪ್ರಾಪ್ತ ಮಗಳನ್ನು ಪ್ರೀತಿಸುತ್ತಿದ್ದ. ಇಬ್ಬರೂ ಪರಸ್ಪರ ಸಹ ಪ್ರೀತಿಸುತ್ತಿದ್ದರು. ಆದರೆ, ಮದುವೆಗೆ ಸೋದರ ಮಾವನ ಕುಟುಂಬದಿಂದ ಒಪ್ಪಿಗೆ ಸಿಗದ ಹಿನ್ನೆಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮಂಜುನಾಥ್ ತನ್ನ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನೆಯ ಬಗ್ಗೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಮಂಜುನಾಥ್ ತನ್ನ ಸೋದರ ಮಾವನ ಮನೆಗೆ ಭೇಟಿ ನೀಡಿದ್ದ. ಅಲ್ಲಿ ತನ್ನ ಪ್ರೀತಿಯ ವಿಷಯದ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಆದರೆ, ಮದುವೆಗೆ ಒಪ್ಪಿಗೆ ಸಿಗದ ಕಾರಣ ಮನನೊಂದು, ಅಜ್ಜವಾರ ಗ್ರಾಮಕ್ಕೆ ವಾಪಸ್ ಆಗಮಿಸಿದ ಮಂಜುನಾಥ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಯುವಕನ ಸಾವಿನ ಬಗ್ಗೆ ಮೃತ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಘಟನೆಯ ಹಿಂದಿನ ನಿಖರ ಕಾರಣವನ್ನು ಕಂಡುಹಿಡಿಯಲು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಪೊಲೀಸ್ ಕ್ರಮ: ಈ ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನ ಹಿಂದಿನ ನಿಖರ ಕಾರಣ ಮತ್ತು ಸಂದರ್ಭಗಳನ್ನು ತಿಳಿಯಲು ತನಿಖೆ ಮುಂದುವರಿದಿದೆ.
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…