ಪ್ರೀತಿಸಿದ ಹುಡುಗನೊಂದಿಗೆ ಮನೆಬಿಟ್ಟು ಓಡಿ ಹೋದ ಕೋಪಕ್ಕೆ ಮಗಳ ತಿಥಿ ಮಾಡಿದ ಅಪ್ಪ. ನಮ್ಮ ಪಾಲಿಗೆ ಮಗಳು ಇನ್ನಿಲ್ಲ ಎಂದು ಇಲ್ಲೊಬ್ಬ ನೊಂದ ತಂದೆ ಊರಿಗೆ ಊಟ ಹಾಕಿಸಿದ್ದಾನೆ.
19 ವರ್ಷದ ಹುಡುಗಿ, 29 ವರ್ಷದ ಹುಡುಗ ಪರಸ್ಪರ ಪ್ರೀತಿಸಿದ್ದರು, ಮದುವೆಯಾಗಲು ಮನೆಯಿಂದ ಪರಾರಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಾಗರಾಳ ಗ್ರಾಮದಲ್ಲಿ ತಂದೆ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ ಕರುಳ ಬಳ್ಳಿ ಸಂಬಂಧ ಕತ್ತರಿಸಿಕೊಂಡಿದ್ದಾನೆ.
ಸುಶ್ಮಿತಾ ಶಿವಗೌಡ ಪಾಟೀಲ ಪ್ರೀತಿಸಿ ಓಡಿಹೋದ ಯುವತಿ. ಅದೇ ಗ್ರಾಮದ ವಿಠ್ಠಲ ಬಸ್ತವಾಡೆ ಎಂಬ ಯುವಕನೊಂದಿಗೆ ಪರಾರಿಯಾಗಿದ್ದ ಸುಶ್ಮಿತಾ.
ವಿಠ್ಠಲ ಬಸ್ತವಾಡ ತಹಶೀಲ್ದಾರ್ ಕಚೇರಿಯಲ್ಲಿ ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ. ಸುಶ್ಮಿತಾ ತಂದೆಯ ನಾಲ್ಕು ಜನ ಹೆಣ್ಣುಮಕ್ಕಳು ಪೈಕಿ ಸುಶ್ಮಿತಾ ಕೊನೆಯವಳು.
ಮನೆತನದ ಸಂಸ್ಕಾರ ಮುರಿದು ಓಡಿಹೋಗಿದ್ದರಿಂದ ಮನನೊಂದಿರೋ ತಂದೆ ಶಿವಗೌಡ ಪಾಟೀಲ. ಮೊದಲಿಗೆ ರಾಯಬಾಗ ಪೊಲೀಸ್ ಸ್ಟೇಷನ್‌ನಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟಿದ್ದ ಶಿವಗೌಡ. ಬಂಧು-ಬಳಗ ಸೇರಿದಂತೆ ಸಂಬಂಧಿಕರನ್ನು ಕರೆಯಿಸಿ ಭರ್ಜರಿ ಭೋಜನ ಹಾಕಿಸಿದ್ದಾನೆ. ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…