ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ ಮಧ್ಯರಾತ್ರಿ ಎರಡು ಬೃಹತ್ ಗಾತ್ರದ ಕರಡಿಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ರೆಸಾರ್ಟ್‌ನ ಗಾರ್ಡನ್ ಹಾಗೂ ಬ್ಯಾಡ್ಮಿಂಟನ್ ಕೋರ್ಟ್ ಪ್ರದೇಶದಲ್ಲಿ ಕರಡಿಗಳು ಓಡಾಡಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದೃಶ್ಯಗಳನ್ನು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿ, ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ನಂದಿಬೆಟ್ಟದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರೆಸ್ಟೀಜ್ ಗಾಲ್ಫ್‌ಶೈರ್‌ಗೆ ಆಹಾರ ಅರಸಿ ಕರಡಿಗಳು ಬಂದಿರಬಹುದೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಿಸಿಟಿವಿ ದೃಶ್ಯಗಳಲ್ಲಿ ಎರಡು ಕರಡಿಗಳು ಕೆಲಕಾಲ ಗಾರ್ಡನ್ ಹಾಗೂ ಬ್ಯಾಡ್ಮಿಂಟನ್ ಕೋರ್ಟ್ ಸುತ್ತಮುತ್ತ ಓಡಾಡಿ ಬಳಿಕ ಅಲ್ಲಿಂದ ತೆರಳಿರುವುದು ಕಂಡುಬಂದಿದೆ.
ಇತ್ತೀಚಿನ ದಿನಗಳಲ್ಲಿ ನಂದಿಬೆಟ್ಟ ಸುತ್ತಮುತ್ತ ವನ್ಯಜೀವಿಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಕರಡಿಗಳು ಗ್ರಾಮಗಳತ್ತ ಬಂದರೆ ಜನರ ಮೇಲೆ ದಾಳಿ ಮಾಡುವ ಅಪಾಯ ಇರುವುದರಿಂದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.
ಅರಣ್ಯ ಇಲಾಖೆ ವನ್ಯಜೀವಿಗಳ ಚಲನವಲನದ ಮೇಲೆ ನಿರಂತರ ನಿಗಾ ವಹಿಸಿ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಜನರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…