ಪ್ರೇಮಿಗಳ ದಿನವೇ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಿಂದ ಬಿದ್ದು ಯುವಕ ಆತ್ಮಹತ್ಯೆ

ಪ್ರೇಮಿಗಳ ದಿನವೇ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ಬೆಳಕಿಗೆ ಬಂದಿದೆ.

ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ.

ಕಳೆದ ಶನಿವಾರ ತನ್ನ ಸ್ನೇಹಿತನ ಬೈಕ್‌ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್‌ನಲ್ಲಿ ಬೈಕ್ ನಿಲ್ಲಿಸಿ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಸ್ ಬಂದಿಲ್ಲ. ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು, ಪೊಲೀಸರಿಗೆ ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರೋ ವೀಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವೀಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್‌ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.

ಬ್ಯಾಗ್‌ನಲ್ಲಿ ಡೆತ್‌ನೋಟ್ ಸಹ ಪತ್ತೆಯಾಗಿದ್ದು, ಅದರಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲ. “ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು” ಎಂದು ಡೆತ್‌ನೋಟ್‌ನಲ್ಲಿ ಯುವಕ ಬರೆದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಸ್ನೇಹಿತರ ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

42 minutes ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

3 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

3 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

5 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

10 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago