ಜೀವ ಕಳೆದುಕೊಂಡಾಗ ಮಾತ್ರ ಜೀವನದ ಮೌಲ್ಯ ಏನೆಂಬುದು ತಿಳಿಯುತ್ತದೆ. ಅನೇಕ ಬಾರಿ ಪ್ರೀತಿಯಲ್ಲಿ ಸೋತಾಗ ಅಥವಾ ಜೀವನದಲ್ಲಿ ಹತಾಶೆಗೊಂಡಾಗ ಆತ್ಮಹತ್ಯೆಗೆ ಮುಂದಾಗುತ್ತಾರೆ. ಆದರೆ, ಈ ಜೀವನವನ್ನು ಪಡೆಯುವುದು ಎಷ್ಟು ಕಷ್ಟ ಎಂದು ಅವರಿಗೆ ತಿಳಿದಿರುವುದಿಲ್ಲ. ಉತ್ತರಪ್ರದೇಶದ ಸುಲ್ತಾನ್‌ಪುರದಿಂದ ಅಂತಹ ಒಂದು ವೀಡಿಯೊ ಹೊರಬಿದ್ದಿದೆ, ಅಲ್ಲಿ ಪ್ರೀತಿಯಲ್ಲಿದ್ದ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು, ಆದರೆ ಮೀನುಗಾರರೊಬ್ಬರು ಜೋಡಿಯನ್ನ ರಕ್ಷಣೆ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಬುದ್ದಿ ಹೇಳಿದ್ದಾನೆ.
ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕ ಮತ್ತು ಯುವತಿಯನ್ನು ಮೀನುಗಾರನೊಬ್ಬ ರಕ್ಷಿಸಿ ಯುವಕನ ಕೆನ್ನೆಗೆ ಭಾರಿಸಿದ್ದಾನೆ. ಜೀವ ಉಳಿಸಿದ ಈ ಆಘಾತಕಾರಿ ಪ್ರಕರಣ ಉತ್ತರಪ್ರದೇಶದ ಸುಲ್ತಾನ್‌ಪುರದಲ್ಲಿ ನಡೆದಿದೆ.
ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಗೋಮತಿ ನದಿಗೆ ಹಾರಿದರು, ಆದರೆ ಅಲ್ಲಿದ್ದ ಮೀನುಗಾರರು ಜೋಡಿಯ ಪ್ರಾಣವನ್ನು ಉಳಿಸಿಕೊಂಡರು. ಆದರೆ, ಇದಾದ ಬಳಿಕ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಲಾಗಿದೆ.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…