ಪ್ರೊ.ಜಿ.ಎಸ್.ಸಿದ್ದಲಿಂಗಯ್ಯನವರಿಂದ ಪರಿಷತ್ತು ಸರ್ವತೋಮುಖ ಬೆಳವಣಿಗೆ ಆಯಿತು-ಪ್ರೊ.ರವಿಕಿರಣ್

ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪರಿಷತ್ತು  ಸರ್ವತೋಮುಖ ಬೆಳವಣಿಗೆ ಆಯಿತು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್‌ ಕಲಾಮಂದಿರ ಆವರಣದಲ್ಲಿ ನಡೆದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು   ಕಸಾಪ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪರಿಷತ್ತು ಧ್ವಜ ರೂಪಗೊಂಡಿತು. ನಾಡಗೀತೆ ಹಾಡುವ ಅವಧಿಗೆ ಬಗ್ಗೆ  ಹೆಚ್ಚು ಮಾಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ,  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಪುಸ್ತಕ ಪ್ರಕಟಣೆ ಯಶಸ್ವಿಯಾಗಿ ನಡೆದವು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ತುಮಕೂರು ಜಿಲ್ಲೆಯ ಬೆಳ್ಳಾವೆಯಲ್ಲಿ ಜನಿಸಿದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು ಕನ್ನಡದ ಪ್ರಾಧ್ಯಾಪಕರಾಗಿ, ಕಾಲೇಜು ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರಾಗಿ, ಹಂಪಿ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.

ಬೆಂಗಳೂರು, ಮೈಸೂರು, ಕರ್ನಾಟಕ, ಕಲಬುರಗಿ ಮತ್ತು ಮಂಗಳೂರು ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್, ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ,   ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ಅವರು  ಕವಿ, ವಿಮರ್ಶಕ, ಸಂಶೋಧಕ, ಅನುವಾದಕರಾಗಿ ಹಲವಾರು ಅಮೂಲ್ಯ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ  ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಕಾವ್ಯಾನಂದ ಪ್ರಶಸ್ತಿ,  ವಚನ ಸಾಹಿತ್ಯಶ್ರೀ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ,  ಬಸವಶ್ರೀ ಪ್ರಶಸ್ತಿ,  ಮಾಸ್ತಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿ ನಾಗರತ್ನಮ್ಮ, ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಇಸ್ತೂರು  ಕೋದಂಡರಾಮ ಭಜನಾ ಮಂಡಲಿ ಕಾರ್ಯದರ್ಶಿ ರಂಗಸ್ವಾಮಯ್ಯ, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಸಹಶಿಕ್ಷಕರುಗಳಾದ ಕೋದಂಡರಾಮ್, ತಿಮ್ಮಯ್ಯ, ವೆಂಕಟೇಶ್, ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

22 minutes ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

7 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

7 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

10 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

13 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

1 day ago