ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ ಹೋರಾಟ ಸದಾ ಅವಿಸ್ಮರಣೀಯ ಎಂದು ಘಾಟಿ ಸುಬ್ರಹ್ಮಣ್ಯ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಘಟಕದ ವತಿಯಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ ಕೃಷ್ಣಪ್ಪ ರವರ 80ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಕೃಷ್ಣಪ್ಪ ಅವರು ಅಂಬೇಡ್ಕರ್ ಚಿಂತನೆಗಳನ್ನು ಅನುಸರಿಸಿ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂಬ ಬಗ್ಗೆ ಪ್ರತಿಪಾದಿಸಿದರು. ಕೃಷ್ಣಪ್ಪ ಅವರು ಶಿಕ್ಷಣ, ಸಂಘಟನೆ, ಹೋರಾಟದ ಸಿದ್ದಾಂತದೊಂದಿಗೆ ಸಾಕಷ್ಟು ಹೋರಾಟಗಳನ್ನು ನಡೆಸಿ, ದಲಿತ ಸಮುದಾಯದ ಏಳಿಗೆಗೆ ದುಡಿದವರಲ್ಲಿ ಪ್ರಮುಖರು ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು) ಮಾತನಾಡಿ, ಪ್ರೊ.ಬಿ ಕೃಷ್ಣಪ್ಪ ಅವರು ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕರು, ಸಾಮಾಜಿಕ ಹೋರಾಟಗಾರರು ಮತ್ತು ಪ್ರಖರ ಸಾಹಿತಿಯಾಗಿದ್ದರು. ಇವರು ಕರ್ನಾಟಕದಲ್ಲಿ ದಲಿತರು, ದಮನಿತರು ಮತ್ತು ಶೋಷಿತರ ಹಕ್ಕುಗಳಿಗಾಗಿ ಧ್ವನಿ ಎತ್ತಲು ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಿದರು. ಇವರು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಿಂದ ಪ್ರೇರಿತರಾಗಿ 1970ರ ದಶಕದಲ್ಲಿ ಕರ್ನಾಟಕದ ಮೂಲೆ ಮೂಲೆಗಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಬಿತ್ತಿದರು. ಶೋಷಿತ ಸಮುದಾಯಗಳಿಗೆ ಸಂವಿಧಾನಬದ್ಧ ಹಕ್ಕುಗಳನ್ನು ದೊರಕಿಸಿಕೊಡಲು ಶ್ರಮಿಸಿದರು. ರಾಜ್ಯದ ನಾನಾ ಕಡೆಗಳಲ್ಲಿ ಹೋರಾಟ ನಡೆಸಿದರು ಎಂದು ಹೇಳಿದರು.

ಈ ವೇಳೆ ಮುಖಂಡರಾದ ಆರ್.ವಿ ಶಿವಕುಮಾರ್, ಜಿಲ್ಲಾ ಸಂಚಾಲಕ ರಾಮಮೂರ್ತಿ ಬೈಲಾಂಜಿನಮೂರ್ತಿ, ಶ್ರೀನಿವಾಸ ಎನ್, ಪೂಜರಂಗಯ್ಯ, ಮಾರಪ್ಪ, ಹನುಮಂತರಾಯಪ್ಪ, ಓಬಳೇಶ್, ಸುಬ್ಬು, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ, ನಾಗರತ್ನಮ್ಮ, ಆಶಾ, ಪ್ರೇಮಾ, ವಿದ್ಯಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

2 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

14 hours ago

ರಾಜಾನುಕುಂಟೆ ಬಳಿ ರೈಲು ಬೋಗಿಗಳಿಗೆ ಬೆಂಕಿ: ಎರಡು ಬೋಗಿಗಳು ಸುಟ್ಟು ಭಸ್ಮ

ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…

20 hours ago

ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು…

21 hours ago

ನಮ್ಮ ತೆರಿಗೆ ನಮ್ಮ ಹಕ್ಕು…

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…

1 day ago

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…

1 day ago