ಅಲ್ಪಸಂಖ್ಯಾತ ಇಲಾಖೆ ವತಿಯಿಂದ 2023-24ನೇ ಸಾಲಿನ IIT, IIIT, NIT, IIM, IISER, AIIMU, NLU, INI & IUSLA ಗಳಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಸೇವಾಸಿಂಧು https://sevasindhu.Karnataka.gov.in ಪೋರ್ಟಲ್‌ನಲ್ಲಿ ನವೆಂಬರ್ 31ರವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2023-24ನೇ ಸಾಲಿನ IIT, IIIT, NIT, IIM, IISER, AIIMU, NLU, INI & IUSLA ಗಳಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಕೋರ್ಸ್ನ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ ಮಾತ್ರ ಪ್ರೋತ್ಸಾಹಧನವನ್ನು ನೀಡಲಾಗುವುದು.
ಸರ್ಕಾರದಿಂದ ಶಾಸನಬದ್ದ ಅನುಮತಿ ಪಡೆದ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಮಾತ್ರ ಪ್ರೋತ್ಸಾಹಧನ ಪಡೆಯಲು ಅರ್ಹರಾಗಿರುತ್ತಾರೆ.
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಗಳು ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು.
ಹಿಂದಿನ ವರ್ಷದ ಪರೀಕ್ಷೆಯಲ್ಲಿ ಅನುತ್ತೀರ್ಣರಾದ (ಬ್ಯಾಕ್‌ಲಾಗ್) ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹಧನ ಪಡೆಯುವ ಅವಕಾಶವಿರುವುದಿಲ್ಲ.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ರೂ.6.00 ಲಕ್ಷಕ್ಕಿಂತ ಮೀರಿರಬಾರದು.
ಅರ್ಜಿದಾರರು httpss://sevasindhu.Karnataka.gov.in/Sevasindhu/Department Services ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ 16ಸಿ, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಭವನ, ಮಿಲ್ಲರ್ ಟ್ಯಾಂಕ್ ಬೆಡ್ ರಸ್ತೆ, ವಸಂತನಗರ, ಬೆಂಗಳೂರು-560052 ಇಲ್ಲಿಗೆ ನಿಗಧಿಪಡಿಸಿದ ದಿನಾಂಕದಂದು ಸಲ್ಲಿಸುವುದು. ಹಾರ್ಡ್ ಕಾಪಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ವಿಧಾನಗಳು ಮತ್ತು FAQs ಇಲ್ಲಿ ಲಭ್ಯವಿದೆ https://Dom.Karnataka.gov.in ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://Dom.Karnataka.gov.in ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ 8277799990. ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ 080-22866966. ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-27627444. ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-27725445. ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-27682882. ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 080-27931899 ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.