ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000/- ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2022-23 ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.
ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳು ಕಚೇರಿಯ ಅಧಿಕೃತ ಜಾಲತಾಣ : https.sevasindhuservices.karntaka.gov.in ಮೂಲಕ ಆನ್‌ಲೈನ್‌ನಲ್ಲಿ 2023ರ ಜುಲೈ 31 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವುದು.
ಷರತ್ತು ಹಾಗೂ ನಿಯಮಗಳು:
ಅರ್ಜಿದಾರರು 2022-23ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು.
ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ : 01.04.2022 ರಿಂದ 31.03.2023 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2022 ರಿಂದ 31-03-2023 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ.
ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000-00 ಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…