2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.
ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣ:https://sevasindhuservices.karnataka.gov.in ಮೂಲಕ ಆನ್ಲೈನ್ನಲ್ಲಿ ಜೂನ್ 30 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 01.04.2023 ರಿಂದ 31.03.2024 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000 ರೂ ಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…