ತ್ಯಾಗರಾಜ್ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೇಬಲ್ ಟಾಪರ್ ದಬಾಂಗ್ ಡೆಲ್ಲಿ ತಂಡವು 3 ಅಂಕಗಳಿಂದ ಪುಣೇರಿ ಪಲ್ಟನ್ ವಿರುದ್ಧ (31-28 ಅಂತರದಲ್ಲಿ)ರೋಚಕ ಗೆಲುವು ಸಾಧಿಸಿತು. ಈ ಮೂಲಕ ದಬಾಂಗ್ ಡೆಲ್ಲಿ ಕೆ.ಸಿ ಪ್ರೋ ಕಬಡ್ಡಿ ಲೀಗ್ (ಪಿಕೆಎಲ್) 12ನೇ ಆವೃತ್ತಿಯ ಚಾಂಪಿಯನ್ ಪಟ್ಟಕ್ಕೇರಿದೆ. ಇದು ಅವರ ಎರಡನೇ ಪಿಕೆಎಲ್ ಪ್ರಶಸ್ತಿಯಾಗಿದೆ. ಈ ಹಿಂದೆ 8ನೇ ಆವೃತ್ತಿಯಲ್ಲಿ ಪ್ರಸ್ತುತ ಮುಖ್ಯ ಕೋಚ್ ಜೋಗಿಂದರ್ ನರ್ವಾಲ್ ಅವರು ನಾಯಕರಾಗಿದ್ದಾಗ ತಂಡ ಚಾಂಪಿಯನ್ ಆಗಿತ್ತು.
ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ನೀರಜ್ ನರ್ವಾಲ್ 9 ಅಂಕ ಗಳಿಸಿದರು. ಅಜಿಂಕ್ಯ ಪವರ್ ಆರಂಕ ಕಲೆ ಹಾಕಿದರು.
ದಬಂಗ್, ತವರಿನಂಗಳದಲ್ಲಿ ಪ್ರಶಸ್ತಿ ಗೆದ್ದ ಎರಡನೇ ತಂಡ ಎನಿಸಿತು. ಎರಡನೇ ಆವೃತ್ತಿಯಲ್ಲಿ (2014) ಯು ಮುಂಬಾ ತಂಡವು ಮೊದಲ ಬಾರಿ ತನ್ನ ತವರಿನಲ್ಲೇ ಚಾಂಪಿಯನ್ ಆಗಿತ್ತು.
ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಡೆಲ್ಲಿ ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಮೊದಲಾರ್ಧದಲ್ಲಿ 6 ಅಂಕಗಳ (20-14)ಮುನ್ನಡೆ ಪಡೆದ ಡೆಲ್ಲಿ ತಂಡಕ್ಕೆ ಉತ್ತರಾರ್ಧದಲ್ಲಿ ಪುಣೇರಿ ಪ್ರಬಲ ಸ್ಪರ್ಧೆಯೊಡ್ಡಿತು. ಅಂತಿಮವಾಗಿ 2023ರ ಚಾಂಪಿಯನ್ ಪುಣೇರಿ ತಂಡವು 3 ಅಂಕಗಳಿಂದ ಸೋತಿತು.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…