Categories: ಕ್ರೀಡೆ

ಪ್ರೋ ಕಬಡ್ಡಿ ಲೀಗ್‌ (ಪಿಕೆಎಲ್‌) 12ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕೇರಿದ ದಬಾಂಗ್‌ ಡೆಲ್ಲಿ ಕೆ.ಸಿ

ತ್ಯಾಗರಾಜ್‌ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈವೋಲ್ಟೇಜ್‌ ಪಂದ್ಯದಲ್ಲಿ ಟೇಬಲ್‌ ಟಾಪರ್‌ ದಬಾಂಗ್‌ ಡೆಲ್ಲಿ ತಂಡವು 3 ಅಂಕಗಳಿಂದ ಪುಣೇರಿ ಪಲ್ಟನ್‌ ವಿರುದ್ಧ (31-28 ಅಂತರದಲ್ಲಿ)ರೋಚಕ ಗೆಲುವು ಸಾಧಿಸಿತು. ಈ ಮೂಲಕ ದಬಾಂಗ್‌ ಡೆಲ್ಲಿ ಕೆ.ಸಿ ಪ್ರೋ ಕಬಡ್ಡಿ ಲೀಗ್‌ (ಪಿಕೆಎಲ್‌) 12ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕೇರಿದೆ. ಇದು ಅವರ ಎರಡನೇ ಪಿಕೆಎಲ್‌ ಪ್ರಶಸ್ತಿಯಾಗಿದೆ. ಈ ಹಿಂದೆ 8ನೇ ಆವೃತ್ತಿಯಲ್ಲಿ ಪ್ರಸ್ತುತ ಮುಖ್ಯ ಕೋಚ್‌ ಜೋಗಿಂದರ್‌ ನರ್ವಾಲ್‌ ಅವರು ನಾಯಕರಾಗಿದ್ದಾಗ ತಂಡ ಚಾಂಪಿಯನ್‌ ಆಗಿತ್ತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ನೀರಜ್ ನರ್ವಾಲ್ 9 ಅಂಕ ಗಳಿಸಿದರು. ಅಜಿಂಕ್ಯ ಪವರ್ ಆರಂಕ ಕಲೆ ಹಾಕಿದರು.

ದಬಂಗ್, ತವರಿನಂಗಳದಲ್ಲಿ ಪ್ರಶಸ್ತಿ ಗೆದ್ದ ಎರಡನೇ ತಂಡ ಎನಿಸಿತು. ಎರಡನೇ ಆವೃತ್ತಿಯಲ್ಲಿ (2014) ಯು ಮುಂಬಾ ತಂಡವು ಮೊದಲ ಬಾರಿ ತನ್ನ ತವರಿನಲ್ಲೇ ಚಾಂಪಿಯನ್ ಆಗಿತ್ತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಡೆಲ್ಲಿ ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಮೊದಲಾರ್ಧದಲ್ಲಿ 6 ಅಂಕಗಳ (20-14)ಮುನ್ನಡೆ ಪಡೆದ ಡೆಲ್ಲಿ ತಂಡಕ್ಕೆ ಉತ್ತರಾರ್ಧದಲ್ಲಿ ಪುಣೇರಿ ಪ್ರಬಲ ಸ್ಪರ್ಧೆಯೊಡ್ಡಿತು. ಅಂತಿಮವಾಗಿ 2023ರ ಚಾಂಪಿಯನ್ ಪುಣೇರಿ ತಂಡವು 3 ಅಂಕಗಳಿಂದ ಸೋತಿತು.

Ramesh Babu

Journalist

Share
Published by
Ramesh Babu

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

16 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

21 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago