ಗುಣಾತ್ಮಕ ಮತ್ತು ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಮಾದರಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಯಥಾಸ್ಥಿತಿಯನ್ನು ರಾಜ್ಯ ಸರ್ಕಾರ ಉಳಿಸಬೇಕಾಗಿದೆ. ಆದರೆ ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುತ್ತಿದೆ. ಪ್ರಸ್ತುತ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಎಂದು ಬದಲಾಯಿಸಿದೆ. ಪ್ರೌಢಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ವಿಲೀನ ಮಾಡುವ ಪ್ರಯತ್ನವನ್ನು ಸರ್ಕಾರ ಕೈಬಿಡಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಘನತೆಯನ್ನು ಯಥಾಸ್ಥಿತಿ ಉಳಿಸಬೇಕೆಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮೂಲಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪ್ರಾಂಶುಪಾಲರ ಸಂಘ ಮತ್ತು ಬೋಧಕೇತರ ನೌಕರರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿಲೀನವನ್ನು ಹಿಂಪಡೆದು ಪಿಯುಸಿ ಪರೀಕ್ಷೆಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಬೇಕಾಗಿದೆ. ಜಿಲ್ಲಾ ಹಂತಗಳಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯನ್ನು ಜಿಲ್ಲಾಪಂಚಾಯಿತಿಗೆ ವಹಿಸಿರುವ ಸರ್ಕಾರದ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬೋಧಕೇತರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದರು.
ಪದವಿ ಪೂರ್ವ ಶಿಕ್ಷಣವು ಶಾಲಾಶಿಕ್ಷಣ ಮತ್ತು ಉನ್ನತ ಶಿಕ್ಷಣ ಹಂತಗಳ ನಡುವೆ ಸೇತುವೆಯಾಗಿದೆ. ಹೊರ ರಾಜ್ಯಗಳ ಶಿಕ್ಷಣ ತಜ್ಞರು ಆಗಮಿಸಿ ನಮ್ಮ ರಾಜ್ಯದ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಅಧ್ಯಯನ ಮಾಡುವುದನ್ನು ಗಮನಿಸಿದರೆ ನಮ್ಮ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆ ಎಷ್ಟು ಚೆನ್ನಾಗಿದೆ ಎಂದು ಹೆಮ್ಮೆ ಎನಿಸುತ್ತದೆ. ಆದರೆ ಇತ್ತೀಚಿಗೆ ರಾಜ್ಯ ಸರ್ಕಾರ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ಸಂಘಟನೆಗಳ ಜೊತೆಗಾಗಲೀ ಮತ್ತು ಶಿಕ್ಷಣ ತಜ್ಞರ ಜೊತೆಗಾಗಲಿ ಚರ್ಚಿಸದೆ ಏಕಾಏಕಿ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ನಿರ್ಧರಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡೆಸುತ್ತಿರುವ ಬದಲಾವಣೆಗಳನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರ ಸಕಾಲದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸದೇ ಹೋದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ ಮತ್ತು ಬೋಧಕೇತರ ಸಂಘಗಳ ಒಕ್ಕೂಟವು ಡಿ.1 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿವೆ ಎಂದರು.
ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರಿಗೆ ಮನವಿ ನೀಡುವ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ. ಕಾರ್ಯಾಧ್ಯಕ್ಷ ಪ್ರಮೋದ್. ಡಿ.ಕುಲಕರ್ಣಿ, ಕಾರ್ಯದರ್ಶಿ ಬಿ.ಆರ್.ವೇಣುಗೋಪಾಲ್, ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ಟಿ.ಆರ್.ಶ್ರೀರಾಮೇಗೌಡ, ಪಿ.ಗೋವಿಂದರಾಜು, ಕೇಶವಮೂರ್ತಿ, ಬೋಧಕೇತರ ಸಂಘದ ಪದಾಧಿಕಾರಿಗಳಾದ ರಮೇಶ್, ನಂದಕುಮಾರ್ ಮೊದಲಾದವರು ಹಾಜರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…