ಪ್ರೌಢಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ವಿಲೀನ ಮಾಡುವ ಪ್ರಯತ್ನವನ್ನ ಸರ್ಕಾರ ಕೈಬಿಡಬೇಕು- ಬೆ.ಗ್ರಾ ಪ.ಪೂ ಕಾ. ಪ್ರಾಂ. ಸಂಘದ ಅಧ್ಯಕ್ಷ ಜಿ.ದಯಾನಂದ್

ಗುಣಾತ್ಮಕ ಮತ್ತು ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಮಾದರಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಯಥಾಸ್ಥಿತಿಯನ್ನು ರಾಜ್ಯ ಸರ್ಕಾರ ಉಳಿಸಬೇಕಾಗಿದೆ. ಆದರೆ ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುತ್ತಿದೆ. ಪ್ರಸ್ತುತ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಎಂದು ಬದಲಾಯಿಸಿದೆ. ಪ್ರೌಢಶಾಲಾ  ಮತ್ತು ಪದವಿ ಪೂರ್ವ ಶಿಕ್ಷಣ ವಿಲೀನ ಮಾಡುವ ಪ್ರಯತ್ನವನ್ನು ಸರ್ಕಾರ ಕೈಬಿಡಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಘನತೆಯನ್ನು ಯಥಾಸ್ಥಿತಿ ಉಳಿಸಬೇಕೆಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್   ಮೂಲಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪ್ರಾಂಶುಪಾಲರ ಸಂಘ ಮತ್ತು ಬೋಧಕೇತರ ನೌಕರರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ‌ಮಾತನಾಡಿದರು.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿಲೀನವನ್ನು ಹಿಂಪಡೆದು ಪಿಯುಸಿ ಪರೀಕ್ಷೆಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಬೇಕಾಗಿದೆ. ಜಿಲ್ಲಾ ಹಂತಗಳಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯನ್ನು ಜಿಲ್ಲಾಪಂಚಾಯಿತಿಗೆ ವಹಿಸಿರುವ  ಸರ್ಕಾರದ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು.   ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬೋಧಕೇತರನ್ನು  ನೇಮಕಾತಿ ಮಾಡಿಕೊಳ್ಳಬೇಕು ಎಂದರು.

ಪದವಿ ಪೂರ್ವ ಶಿಕ್ಷಣವು ಶಾಲಾಶಿಕ್ಷಣ ಮತ್ತು ಉನ್ನತ ಶಿಕ್ಷಣ ಹಂತಗಳ ನಡುವೆ ಸೇತುವೆಯಾಗಿದೆ. ಹೊರ ರಾಜ್ಯಗಳ ಶಿಕ್ಷಣ ತಜ್ಞರು ಆಗಮಿಸಿ ನಮ್ಮ ರಾಜ್ಯದ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಅಧ್ಯಯನ ಮಾಡುವುದನ್ನು ಗಮನಿಸಿದರೆ ನಮ್ಮ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆ ಎಷ್ಟು ಚೆನ್ನಾಗಿದೆ ಎಂದು ಹೆಮ್ಮೆ ಎನಿಸುತ್ತದೆ. ಆದರೆ ಇತ್ತೀಚಿಗೆ  ರಾಜ್ಯ ಸರ್ಕಾರ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ಸಂಘಟನೆಗಳ ಜೊತೆಗಾಗಲೀ ಮತ್ತು ಶಿಕ್ಷಣ ತಜ್ಞರ ಜೊತೆಗಾಗಲಿ ಚರ್ಚಿಸದೆ ಏಕಾಏಕಿ‌ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ನಿರ್ಧರಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡೆಸುತ್ತಿರುವ ಬದಲಾವಣೆಗಳನ್ನು ಕೂಡಲೇ ನಿಲ್ಲಿಸಬೇಕು.  ಸರ್ಕಾರ ಸಕಾಲದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸದೇ ಹೋದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ ಮತ್ತು ಬೋಧಕೇತರ ಸಂಘಗಳ ಒಕ್ಕೂಟವು ಡಿ.1 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿವೆ ಎಂದರು.

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್  ಅವರಿಗೆ  ಮನವಿ ನೀಡುವ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ. ಕಾರ್ಯಾಧ್ಯಕ್ಷ ಪ್ರಮೋದ್. ಡಿ.ಕುಲಕರ್ಣಿ, ಕಾರ್ಯದರ್ಶಿ  ಬಿ.ಆರ್.ವೇಣುಗೋಪಾಲ್, ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ಟಿ.ಆರ್.ಶ್ರೀರಾಮೇಗೌಡ,  ಪಿ.ಗೋವಿಂದರಾಜು, ಕೇಶವಮೂರ್ತಿ, ಬೋಧಕೇತರ ಸಂಘದ ಪದಾಧಿಕಾರಿಗಳಾದ ರಮೇಶ್, ನಂದಕುಮಾರ್ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

8 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

11 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

13 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

14 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

15 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

19 hours ago