ಪ್ಲಾಸ್ಟಿಕ್ ಡ್ರಮ್ ಇದ್ದ ಗೋಡನ್ ಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಭಸ್ಮ; ಪಾಲನಜೋಗಿಹಳ್ಳಿ ಬಳಿ ಘಟನೆ

ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿಯ ಪ್ಲಾಸ್ಟಿಕ್ ಗೋಡೋನಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ.

ರೋಜಿಪುರ ನಿವಾಸಿ ನವೀನ್ ಎನ್ನುವವರಿಗೆ ಸೇರಿದ ಪ್ಲಾಸ್ಟಿಕ್ ಗೋಡನ್ ಇದಾಗಿದ್ದು, ಗೋಡನ್ ಹಿಂಭಾಗದಲ್ಲಿನ ಜಮೀನಿನಲ್ಲಿದ್ದ ಹುಲ್ಲಿಗೆ ತಗುಲಿದ್ದ ಬೆಂಕಿ, ಗೋಡನ್ ಗೆ ವ್ಯಾಪಿಸಿ ಸುಮಾರು 20 ರಿಂದ 25 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಭಸ್ಮವಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲು ಶ್ರಮಿಸಿ ಬೆಂಕಿ ನಂದಿಸಿದ್ದಾರೆ.

ಸ್ಥಳೀಯರು ಗೋಡನ್ ಒಳಗಿಂದ ಹೊಗೆ ಬರುತ್ತಿರುವುದು ಕಂಡು ಮಾಲೀಕರಿಗೆ ಸುದ್ದಿ ಮುಟ್ಟಿಸಿದ್ದು, ಮಾಲೀಕ ನವೀನ್ ಸ್ಥಳಕ್ಕೆ ಬರುವ ವೇಳೆಗೆ ಬೆಂಕಿಯ ತೀವ್ರವಾಗಿ ವ್ಯಾಪಿಸಿದೆ.

ಘಟನೆಯಲ್ಲಿ ಎರಡು ಸಾವಿರ ಪ್ಲಾಸ್ಟಿಕ್ ಡ್ರಮ್, 1500 ಪ್ಲಾಸ್ಟಿಕ್ ಕ್ರೇಟ್, ಅಕ್ರಾಲಿಕ್ ಶೀಟ್ ಸುಟ್ಟು ಭಸ್ಮ ಆಗಿರುವುದರಿಂದ ಅಂದಾಜು 20-25 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳು ನಷ್ಟವಾಗಿದೆ ಎನ್ನಲಾಗುತ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಆರು ತಿಂಗಳಷ್ಟೆ ತನ್ನ ಸ್ನೇಹಿತ ಬಳಿ ಅಂಗಡಿಯನ್ನು ಖರೀದಿಸಿ ವ್ಯಾಪಾರ ನಡೆಸುತ್ತಿದ್ದ ನವೀನ್, ನಾಳೆ ಗೋದಾಮಿನಲ್ಲಿದ್ದ ಸ್ಟಾಕ್ ಲೋಡ್‌ ಮಾಡಿ ಮಾರ್ಕೆಟ್ ಗೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸಲಾಗಿತ್ತು. ಅಷ್ಟರಲ್ಲಿ ಈ‌ ಘಟನೆ ಸಂಭವಿಸಿದೆ. ಇದರಿಂದ ತೀವ್ರ ನಷ್ಟಕ್ಕೆ ಒಳಗಾಗಿರುವ ಗೋದಾಮಿನ‌ ಮಾಲೀಕ

Ramesh Babu

Journalist

Recent Posts

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

5 minutes ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

5 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

8 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago