ಬೆಂಗಳೂರು: ಸ್ವಚ್ಛ ಹಸಿರು ಮತ್ತು ಆರೋಗ್ಯಕರ ನಾಳೆಗೆ ಕೊಡುಗೆ ನೀಡುವ ಗುರಿಯೊಂದಿಗೆ ಐಟಿಸಿ ಸನ್‌ಫೀಸ್ಟ್ ಯಿಪ್ಪೀ ವೇ ಫಾರ್ ಲೈಪ್ ಸಹಯೋಗದೊಂದಿಗೆ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿತು. ಜೊತೆಗೆ, ಪ್ಲಾಸ್ಟಿಕ್ ನಿಂದ ತಯಾರಿಸಿದ ಬೆಂಚು ಮತ್ತು ಮೇಜುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಿಸಲಾಯಿತು.
ವೈಟ್‌ಫೀಲ್ಡ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಮೇಳದಲ್ಲಿ ಪ್ಲಾಸ್ಟಿಕ್ ಕುರಿತು ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಹಾಗೂ ಅದರ ಮರುಬಳಕೆ ಮಾಡುವ ಬಗ್ಗೆ ವಿಜ್ಞಾನ ಮೇಳದಲ್ಲಿ ಪ್ರದರ್ಶನ ನೀಡಲಾಯಿತು.
ಸುಸ್ಥಿರತೆ ವಿಷಯಗಳ ಕುರಿತು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸಲು ಚಿತ್ರಕಲಾ ಸ್ಪರ್ಧೆಯನ್ನು ಸಹ ಇದೇ ವೇಳೆ ಆಯೋಜಿಸಲಾಗಿತ್ತು. ಪರಿಸರ ಪ್ರಜ್ಞೆಯ ಉತ್ಪನ್ನಗಳನ್ನು ಉತ್ತೇಜಿಸುವ ಮೂಲಕ ವಿದ್ಯಾರ್ಥಿಗಳು ನಡೆಸುವ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೆ ಮರುಬಳಕೆ ಪ್ಲಾಸ್ಟಿಕ್ ತ್ಯಾಜ್ಯದಿಂದ ತಯಾರಿಸಿದ 100 ಬೆಂಚುಗಳು ಮತ್ತು ಮೇಜುಗಳನ್ನು ಸಹ ಇದೇವೇಳೆ ವಿತರಿಸಲಾಯಿತು.
ಐಟಿಸಿ ಫುಡ್ಸ್‌ನ ಸ್ನ್ಯಾಕ್ಸ್, ನೂಡಲ್ಸ್ ಮತ್ತು ಪಾಸ್ತಾದ ಸಿಒಒ ಕವಿತಾ ಚತುರ್ವೇದಿ ಮಾತನಾಡಿ, ಐಟಿಸಿಯ ಸುಸ್ಥಿರತೆ ಬದ್ಧತೆಗೆ ಅನುಗುಣವಾಗಿ ಯುವ ಮನಸ್ಸುಗಳಲ್ಲಿ ಪರಿಸರ ಜವಾಬ್ದಾರಿಯನ್ನು ತುಂಬಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ವಚ್ಛ ಭವಿಷ್ಯಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
2022 ರಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ಇದುವರೆಗೂ ಭಾರತದ 4,000 ಶಾಲೆಗಳಲ್ಲಿ 21 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅವರಿಗೆ ಶಿಕ್ಷಣ ನೀಡಿದೆ. ಅಷ್ಟೆ ಅಲ್ಲದೆ, 58,000 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಮರುಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ 4000 ಕ್ಕೂ ಹೆಚ್ಚು ಮೇಜುಗಳು ಮತ್ತು ಬೆಂಚುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಣೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ನ್ಯೂಟ್ರಿಷನ್ ಸೈನ್ಸಸ್ ITC LTD ಮುಖ್ಯಸ್ಥೆ ಡಾ. ಅಗಾಥಾ ಬೆಟ್ಸಿ, ಐಸಿಎಂಎಲ್ ಮಾಲೂರ್ ITC ಲಿಮಿಟೆಡ್ ಮುಖ್ಯಸ್ಥರು ಮುತ್ತು ಕೃಷ್ಣ ಮೂರ್ತಿ, ಇಎಚ್ಎಸ್ & ಸಸ್ಟೈನಬಿಲಿಟಿ ITC LTD ಜಿಎಂ ಅನಂತ್ ಮಹೇಶ್ವರಿ ಹಾಗೂ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠಶಾಲಾ ಮುಖ್ಯಶಿಕ್ಷಕಿ ಎಚ್. ವಿಜಯಲಕ್ಷ್ಮಿ ಉಪಸ್ಥಿತರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…