ಪ್ಲಾಸ್ಟಿಕ್‌ ಮರುಬಳಕೆ ಕುರಿತು ಶಾಲಾ ಮಕ್ಕಳಿಗೆ ಜಾಗೃತಿ

ಬೆಂಗಳೂರು: ಸ್ವಚ್ಛ ಹಸಿರು ಮತ್ತು ಆರೋಗ್ಯಕರ ನಾಳೆಗೆ ಕೊಡುಗೆ ನೀಡುವ ಗುರಿಯೊಂದಿಗೆ ಐಟಿಸಿ ಸನ್‌ಫೀಸ್ಟ್‌ ಯಿಪ್ಪೀ ವೇ ಫಾರ್‌ ಲೈಪ್‌ ಸಹಯೋಗದೊಂದಿಗೆ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿತು. ಜೊತೆಗೆ, ಪ್ಲಾಸ್ಟಿಕ್‌ ನಿಂದ ತಯಾರಿಸಿದ ಬೆಂಚು ಮತ್ತು ಮೇಜುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಿಸಲಾಯಿತು.

ವೈಟ್‌ಫೀಲ್ಡ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಮೇಳದಲ್ಲಿ ಪ್ಲಾಸ್ಟಿಕ್‌ ಕುರಿತು ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವುದು ಹಾಗೂ ಅದರ ಮರುಬಳಕೆ ಮಾಡುವ ಬಗ್ಗೆ ವಿಜ್ಞಾನ ಮೇಳದಲ್ಲಿ ಪ್ರದರ್ಶನ ನೀಡಲಾಯಿತು.

ಸುಸ್ಥಿರತೆ ವಿಷಯಗಳ ಕುರಿತು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸಲು ಚಿತ್ರಕಲಾ ಸ್ಪರ್ಧೆಯನ್ನು ಸಹ ಇದೇ ವೇಳೆ ಆಯೋಜಿಸಲಾಗಿತ್ತು. ಪರಿಸರ ಪ್ರಜ್ಞೆಯ ಉತ್ಪನ್ನಗಳನ್ನು ಉತ್ತೇಜಿಸುವ ಮೂಲಕ ವಿದ್ಯಾರ್ಥಿಗಳು ನಡೆಸುವ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೆ ಮರುಬಳಕೆ ಪ್ಲಾಸ್ಟಿಕ್‌ ತ್ಯಾಜ್ಯದಿಂದ ತಯಾರಿಸಿದ 100 ಬೆಂಚುಗಳು ಮತ್ತು ಮೇಜುಗಳನ್ನು ಸಹ ಇದೇವೇಳೆ ವಿತರಿಸಲಾಯಿತು.
ಐಟಿಸಿ ಫುಡ್ಸ್‌ನ ಸ್ನ್ಯಾಕ್ಸ್‌, ನೂಡಲ್ಸ್‌ ಮತ್ತು ಪಾಸ್ತಾದ ಸಿಒಒ ಕವಿತಾ ಚತುರ್ವೇದಿ ಮಾತನಾಡಿ, ಐಟಿಸಿಯ ಸುಸ್ಥಿರತೆ ಬದ್ಧತೆಗೆ ಅನುಗುಣವಾಗಿ ಯುವ ಮನಸ್ಸುಗಳಲ್ಲಿ ಪರಿಸರ ಜವಾಬ್ದಾರಿಯನ್ನು ತುಂಬಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ವಚ್ಛ ಭವಿಷ್ಯಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

2022 ರಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ಇದುವರೆಗೂ ಭಾರತದ 4,000 ಶಾಲೆಗಳಲ್ಲಿ 21 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅವರಿಗೆ ಶಿಕ್ಷಣ ನೀಡಿದೆ. ಅಷ್ಟೆ ಅಲ್ಲದೆ, 58,000 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಮರುಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ 4000 ಕ್ಕೂ ಹೆಚ್ಚು ಮೇಜುಗಳು ಮತ್ತು ಬೆಂಚುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಣೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನ್ಯೂಟ್ರಿಷನ್ ಸೈನ್ಸಸ್ ITC LTD ಮುಖ್ಯಸ್ಥೆ ಡಾ. ಅಗಾಥಾ ಬೆಟ್ಸಿ, ಐಸಿಎಂಎಲ್ ಮಾಲೂರ್ ITC ಲಿಮಿಟೆಡ್ ಮುಖ್ಯಸ್ಥರು ಮುತ್ತು ಕೃಷ್ಣ ಮೂರ್ತಿ, ಇಎಚ್ಎಸ್ & ಸಸ್ಟೈನಬಿಲಿಟಿ ITC LTD ಜಿಎಂ ಅನಂತ್ ಮಹೇಶ್ವರಿ ಹಾಗೂ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠಶಾಲಾ ಮುಖ್ಯಶಿಕ್ಷಕಿ ಎಚ್‌. ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೆ.28ರಿಂದ 30ರವರೆಗೆ ಬ್ಯಾಂಕ್ ನೌಕರರ ಮುಷ್ಕರ: ಭಾನುವಾರ ಬ್ಯಾಂಕ್‌ ಸೇವೆ ಲಭ್ಯ

ಬ್ಯಾಂಕ್ ನೌಕರರ ಒಕ್ಕೂಟವು ಸೆ.28ರಿಂದ 30ರವರೆಗೆ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಗ್ರಾಹಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ…

5 hours ago

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ- ಸಚಿವ ಎನ್. ಚಲುವರಾಯಸ್ವಾಮಿ ಭರವಸೆ*

ಜನರು ನೀಡಿದ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು‌ ಎಂಬ ಉದ್ದೇಶದಿಂದ ನನಗಿರುವ ಅಧಿಕಾರವನ್ನು ಬಳಸಿಕೊಂಡು ನಿಮ್ಮ ಸೇವೆ ಮಾಡುತ್ತಿದ್ದೆನೆ ಎಂದು ಮಂಡ್ಯ…

5 hours ago

ಹೈನುಗಾರಿಕೆಗೆ ಅಜೋಲಾ ಆಸರೆ: ಹಸಿರು ಮೇವಿನ ಕೊರತೆಗೆ ಪರ್ಯಾಯ: ಹಾಲು ನೀಡುವ ರಾಸುಗಳಿಗೆ ಪೌಷ್ಟಿಕ ಪೂರಕ ಆಹಾರ

ಬೆಂಗಳೂರು ಗ್ರಾಮಾಂತರ: ಮಳೆಯ ಕೊರತೆ ಹಾಗೂ ಹಸಿರು ಮೇವಿನ ಅಭಾವದಿಂದ ಜಾನುವಾರು ಸಾಕಾಣಿಕೆದಾರರು ಎದುರಿಸುತ್ತಿರುವ ಸಂಕಷ್ಟಕ್ಕೆ ಪರ್ಯಾಯವಾಗಿ, ಜಾನುವಾರುಗಳಿಗೆ ಸ್ಥಳೀಯವಾಗಿಯೇ…

15 hours ago

ಸೆ. 28ಕ್ಕೆ ಅವತಿ ಬೆಟ್ಟದಲ್ಲಿ “ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026″

ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…

1 day ago

ಮಾದಕ ವಸ್ತುಗಳ (ಡ್ರಗ್ಸ್) ಸಂಪೂರ್ಣ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಒಟ್ಟಾಗಿ ಕರ್ತವ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಡಾ.ಕೆ.ಎನ್.ಅನುರಾಧ

ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…

1 day ago

ನಿಷೇಧಿತ ಕ್ಯಾಟ್ ಫಿಶ್ ಸಾಕಾಣಿಕೆ ಸ್ಥಳಗಳಿಗೆ ಸಿಇಒ ದಿಢೀರ್ ಭೇಟಿ: ಸ್ಥಳದಲ್ಲೇ ಕ್ಯಾಟ್ ಫಿಶ್, ಹೊಂಡಗಳ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್‌ ಫಿಶ್‌ ಸಾಕಣೆ ಮಾಡುತ್ತಿದ್ದ ಹೊಂಡಗಳ…

1 day ago