ದೊಡ್ಡಬಳ್ಳಾಪುರ ತಾಲೂಕಿನ ವೀರಾಪುರ ರಸ್ತೆಯ ಅರ್ಕಾವತಿ ನದಿ ಪಾತ್ರದ ಚಿಕ್ಕತುಮಕೂರು ಕೆರೆಯ ಸಮೀಪ ಇರುವ ಪ್ಲಾಸ್ಟಿಕ್ ವಸ್ತು ತಯಾರಿಕಾ ಕಾರ್ಖೆನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಾರ್ಖಾನೆ ಸಂಪೂರ್ಣ ಸುಟ್ಟುಭಸ್ಮವಾಗಿದೆ ಎಂದು ತಿಳಿದುಬಂದಿದೆ.
ಕಾರ್ಖಾನೆಯಲ್ಲಿ ರಾತ್ರಿ ಸುಮಾರು 11 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಇಂದು ಬೆಳಗ್ಗೆಯೂ ಸಹ ಹೊತ್ತಿ ಉರಿಯುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕದಳ ದೌಡಾಯಿಸಿ ಬೆಂಕಿನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಲ್ಲ ಎಂದು ತಿಳಿದುಬಂದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..