ಪ.ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ದಾಖಲು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳಲ್ಲಿ ಪಡೆಯಬಹುದಾಗಿದೆ. ಮೇ 3ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

*ಷರತ್ತುಗಳು*

ವಿದ್ಯಾರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
2024 25 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರಬೇಕು
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2,50,000 ಗಳು ಒಳಗಿರಬೇಕು. ತಹಶೀಲ್ದಾರ್ ರವರಿಂದ ಪಡೆದ ಜಾತಿ ಮತ್ತು ಆದಾಯ ಪತ್ರ ಕಡ್ಡಾಯವಾಗಿ ಲಗತಿಸಬೇಕು.

ಪ್ರತಿಷ್ಠಿತ ಶಾಲೆಗಳಿಗೆ ಒಮ್ಮೆ ದಾಖಲಾದ ವಿದ್ಯಾರ್ಥಿಗಳು 10 ಅಥವಾ 12ನೇ ತರಗತಿಯವರೆಗೆ ದಾಖಲಾದ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮುಂದುವರಿಸುವುದು
10ನೇ ತರಗತಿ ವ್ಯಾಸಂಗ ಪೂರ್ಣಗೊಳಿಸಿದ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಪ್ರತಿಷ್ಠಿತ ಶಾಲೆಯಲ್ಲಿ ಪಿಯುಸಿ ತರಗತಿಯನ್ನು ನಡೆಸದೇ ಇದ್ದಲ್ಲಿ ಅದೇ ಜಿಲ್ಲೆಯಲ್ಲಿನ ಪಿಯುಸಿ ಇರುವ ಪ್ರತಿಷ್ಠಿತ ಶಾಲೆ ಅಥವಾ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.
ಪ್ರವೇಶ ಪರೀಕ್ಷೆಯನ್ನು ಡಯಟ್ ಮೂಲಕ ನಡೆಸಿ ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು.

ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಈ ಕೆಳಕಂಡ ಅತಿ ಹಿಂದುಳಿದ ವರ್ಗದವರಿಗೆ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ.

ಸಫಾಯಿ ಕರ್ಮಚಾರಿಗಳ ಮಕ್ಕಳು, ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮಕ್ಕಳು, ದೇವದಾಸಿಯರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರ ಮಕ್ಕಳು, ಕೋವಿಡ್ 19 ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು, ಸಿಂಗಲ್ ಫ್ಯಾಮಿಲಿ ಮಕ್ಕಳು, ಯೋಜನಾ ನಿರಾಶ್ರಿತರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಕೊಳಗೇರಿಯಲ್ಲಿ ವಾಸಿಸುತ್ತಿರುವ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲವಾದದಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು, ದೌರ್ಜನ್ಯದಲ್ಲಿ ನೋಂದವರ ಮಕ್ಕಳು, ಜೀತ ವಿಮುಕ್ತ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂ.ಸಂ. 080-29787448 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

2 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

3 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

22 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

1 day ago