ಫಲಿಸಿದ ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ: ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಮತ್ತು ಅಭಿನಯ ಶಾರದೆ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

ಕನ್ನಡ ಚಲನಚಿತ್ರ ರಂಗದಲ್ಲಿ ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರನ್ನು ರಂಜಿಸಿದ ಹಿರಿಯ ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಮತ್ತು ಅಭಿನಯ ಶಾರದೆ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು, ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ.

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಮನವಿ ಮಾಡಿಕೊಂಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು.

1972ರಲ್ಲಿ ವಂಶವೃಕ್ಷ ಚಿತ್ರದಲ್ಲಿ ನಟಿಸಿದ್ದ ವಿಷ್ಣುವರ್ಧನ್ ಅವರು ಅದೇ ವರ್ಷ ಬಿಡುಗಡೆಯಾಗಿದ್ದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟನಾಗಿ ಕಾಣಿಸಿಕೊಂಡರು. ಈ ಚಿತ್ರ ಬ್ಲಾಕ್ ಬಸ್ಟರ್ ಚಿತ್ರವಾಗಿದ್ದು ಮೊದಲ ಪ್ರಯತ್ನದಲ್ಲೇ ವಿಷ್ಣುವರ್ಧನ್ ದೊಡ್ಡ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡರು. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು 220 ಸಿನಿಮಾಗಳಲ್ಲಿ ವಿಷ್ಣುವರ್ಧನ್ ನಟಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯವು 2005ರಲ್ಲಿ ವಿಷ್ಣುವರ್ಧನ್ ಅವರಿಗೆ ಗೌರವ ಡಾಕ್ಟರೇಟ್ ಕೊಟ್ಟು ಗೌರವಿಸಿತ್ತು.

ದಿವಂಗತ ಸರೋಜಾದೇವಿ ಹಿನ್ನೆಲೆ

ಕನ್ನಡದ ಹಿರಿಯ ಚಲನಚಿತ್ರ ನಟಿಯರಲ್ಲಿ ಬಿ. ಸರೋಜಾದೇವಿ ಸಹ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿಯಾಗಿ ಗುರುತಿಸಿಕೊಂಡರು. ಅವರು ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ಅಭಿನಯ ಸರಸ್ವತಿ’ ಮತ್ತು ತಮಿಳಿನಲ್ಲಿ ‘ಕನ್ನಡತು ಪೈಂಗಿಲಿ’ (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ.

ಸರೋಜಾದೇವಿ ಅವರು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾರತದ 60ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತ ಸರ್ಕಾರ 2008ರ ಜೀವಮಾನ ಸಾಧನೆ ಪ್ರಶಸ್ತಿ ನೀಡಿತ್ತು. ಇನ್ನು 1992ರಲ್ಲಿ ‘ಪದ್ಮಭೂಷಣ ಪ್ರಶಸ್ತಿ’ ಮತ್ತು 1969ರಲ್ಲಿ ಪದ್ಮಶ್ರೀ ಪಡೆದಿದ್ದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

2 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

2 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

5 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

13 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

15 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago