ಕನ್ನಡ ಚಲನಚಿತ್ರ ರಂಗದಲ್ಲಿ ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರನ್ನು ರಂಜಿಸಿದ ಹಿರಿಯ ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಮತ್ತು ಅಭಿನಯ ಶಾರದೆ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು, ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ.
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಮನವಿ ಮಾಡಿಕೊಂಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು.
1972ರಲ್ಲಿ ವಂಶವೃಕ್ಷ ಚಿತ್ರದಲ್ಲಿ ನಟಿಸಿದ್ದ ವಿಷ್ಣುವರ್ಧನ್ ಅವರು ಅದೇ ವರ್ಷ ಬಿಡುಗಡೆಯಾಗಿದ್ದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟನಾಗಿ ಕಾಣಿಸಿಕೊಂಡರು. ಈ ಚಿತ್ರ ಬ್ಲಾಕ್ ಬಸ್ಟರ್ ಚಿತ್ರವಾಗಿದ್ದು ಮೊದಲ ಪ್ರಯತ್ನದಲ್ಲೇ ವಿಷ್ಣುವರ್ಧನ್ ದೊಡ್ಡ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡರು. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು 220 ಸಿನಿಮಾಗಳಲ್ಲಿ ವಿಷ್ಣುವರ್ಧನ್ ನಟಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯವು 2005ರಲ್ಲಿ ವಿಷ್ಣುವರ್ಧನ್ ಅವರಿಗೆ ಗೌರವ ಡಾಕ್ಟರೇಟ್ ಕೊಟ್ಟು ಗೌರವಿಸಿತ್ತು.
ದಿವಂಗತ ಸರೋಜಾದೇವಿ ಹಿನ್ನೆಲೆ
ಕನ್ನಡದ ಹಿರಿಯ ಚಲನಚಿತ್ರ ನಟಿಯರಲ್ಲಿ ಬಿ. ಸರೋಜಾದೇವಿ ಸಹ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿಯಾಗಿ ಗುರುತಿಸಿಕೊಂಡರು. ಅವರು ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ಅಭಿನಯ ಸರಸ್ವತಿ’ ಮತ್ತು ತಮಿಳಿನಲ್ಲಿ ‘ಕನ್ನಡತು ಪೈಂಗಿಲಿ’ (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ.
ಸರೋಜಾದೇವಿ ಅವರು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾರತದ 60ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತ ಸರ್ಕಾರ 2008ರ ಜೀವಮಾನ ಸಾಧನೆ ಪ್ರಶಸ್ತಿ ನೀಡಿತ್ತು. ಇನ್ನು 1992ರಲ್ಲಿ ‘ಪದ್ಮಭೂಷಣ ಪ್ರಶಸ್ತಿ’ ಮತ್ತು 1969ರಲ್ಲಿ ಪದ್ಮಶ್ರೀ ಪಡೆದಿದ್ದರು.
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…