ಫವತಿ ಖಾತೆ ವಿಶೇಷ ಆಂದೋಲನಕ್ಕೆ ಚಾಲನೆ: ಆಂದೋಲನವನ್ನ ರೈತರು ಸದುಪಯೋಗಪಡಿಸಿಕೊಳ್ಳಬೇಕು- ಶಾಸಕ ಧೀರಜ್ ಮುನಿರಾಜ್ ಕರೆ

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಹಾಗೇ ಇದೆ. ಈ ಹಿನ್ನೆಲೆ ಕಂದಾಯ ಇಲಾಖಾ ವತಿಯಿಂದ ಫವತಿ ವಾರಸು ಖಾತೆ ವಿಶೇಷ ಆಂದೋಲನವನ್ನ ಹಮ್ಮಿಕೊಳ್ಳಲಾಗಿದೆ. ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜನವರಿ 05 ರಿಂದ ಫೆಬ್ರವರಿ 05ರ ವರೆಗೆ ಅವಕಾಶ ಮಾಡಲಾಗಿದೆ ಎಂದು ಶಾಸಕ ಧೀರಜ್ ಹೇಳಿದರು.

ತಾಲೂಕಿನಲ್ಲಿ ಸುಮಾರು 11 ಸಾವಿರ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಪಡೆಯಲು ರೈತರಿಗೆ ಸಾಧ್ಯವಾಗದೇ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಸವಲತ್ತು‌ ಪಡೆಯಲು ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ನಾಡಕಚೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.

ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಮಾತನಾಡಿ, ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು ಎಂದರು.

ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ  ಸದುಪಯೋಗ ಪಡೆದುಕೊಳ್ಳಲು ಎಂದು ತಿಳಿಸಿದರು.

ನಂತರ ತಾಲೂಕು‌ ಕಚೇರಿಯ ವಿವಿಧ ಇಲಾಖಾ ಕೌಂಟರ್ ಗಳಿಗೆ ದಿಢೀರ್ ಅಧಿಕಾರಿಗಳ ಕಾರ್ಯವೈಖರಿ ವಿಕ್ಷಣೆ ಮಾಡಿದರು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ವಿತರಣೆಗೆ ಪ್ರತ್ಯೇಕ ಕೌಂಟರ್ ತೆಗೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Ramesh Babu

Journalist

Recent Posts

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

29 minutes ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

2 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

12 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

21 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago