
ದೊಡ್ಡಬಳ್ಳಾಪುರ: ಫಾಕ್ಸ್‌ಕಾನ್ ಕಂಪನಿಯ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗೀತಂ ವಿಶ್ವವಿದ್ಯಾಲಯದ ಹಿಂಭಾಗದಲ್ಲಿರುವ ಕೊನಘಟ್ಟ ಮುಖ್ಯ ರಸ್ತೆಯಲ್ಲಿ ಇಂದು ಬೆಳಗ್ಗೆ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಅಪಘಾತದಲ್ಲಿ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಈ ಭಾಗದಲ್ಲಿ ಫಾಕ್ಸ್‌ಕಾನ್ ಕಂಪನಿಯ ಬಸ್‌ಗಳ ಸಂಚಾರದಿಂದ ಪದೇಪದೇ ಅಪಘಾತಗಳು ಸಂಭವಿಸುತ್ತಿವೆ ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಕಂಪನಿ ಬಸ್‌ಗಳ ಅತಿ ವೇಗ ಹಾಗೂ ಅಜಾಗರೂಕ ಚಾಲನೆಗೆ ಕಡಿವಾಣ ಹಾಕುವಂತೆ ಅವರು ಒತ್ತಾಯಿಸಿದ್ದಾರೆ.

ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಪೊಲೀಸರು ಕಂಪನಿ ಬಸ್‌ಗಳ ಸಂಚಾರದ ಮೇಲೆ ನಿಗಾ ಇರಿಸಿ, ನಿಯಮ ಉಲ್ಲಂಘಿಸುವ ಚಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.