ಫಾಕ್ಸ್ ಕಾನ್ ಕಂಪನಿಗೆ 300 ಎಕರೆ ಭೂಮಿ: ಭೂಸ್ವಾಧೀನ ಪರಿಹಾರ ನ್ಯಾಯಾಲಯದಲ್ಲಿ ಠೇವಣಿ, ಪೊಲೀಸ್ ನೆರವಿನಿಂದ ಫೆನ್ಸಿಂಗ್: ಕೆಐಎಡಿಬಿ ಸಿಇಓ ಡಾ. ಮಹೇಶ ಸ್ಪಷ್ಟನೆ

ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ.

ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.

ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಖಾತೆದಾರರಿಗೆ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ವಿವರಿಸಿದ್ದಾರೆ.

ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ‌ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್‌ಕಾನ್‌ ಕಂಪನಿಗೆ 300 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿರುತ್ತದೆ ಎಂದಿದ್ದಾರೆ.

ದೊಡ್ಡಗೊಲ್ಲಹಳ್ಳಿ ಗ್ರಾಮದ ಸರ್ವೆ ನಂಬರ್ 91/1, 80/3, 92, 98/1, 98/2, 98/4, 93, 8/3, 76, 81/1,

87/4ಪಿ, 90/1 ಮತ್ತು ಚಪ್ಪರದಹಳ್ಳಿ ಗ್ರಾಮದ ಸ.ನಂ.4ಗಳಲ್ಲಿ ಕಂಪನಿಯ ವತಿಯಿಂದ ಫೆನ್ಸಿಂಗ್
ಹಾಕಲು ಹೋದಾಗ ಖಾತೆದಾರರು ಪ್ರತಿಭಟನೆ ನಡೆಸಿ ಫೆನ್ಸಿಂಗ್ ಹಾಕಲು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.

Ramesh Babu

Journalist

Recent Posts

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

26 minutes ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

12 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

12 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

14 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

23 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago