ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ.
ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.
ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಖಾತೆದಾರರಿಗೆ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ವಿವರಿಸಿದ್ದಾರೆ.
ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್‌ಕಾನ್ ಕಂಪನಿಗೆ 300 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿರುತ್ತದೆ ಎಂದಿದ್ದಾರೆ.
87/4ಪಿ, 90/1 ಮತ್ತು ಚಪ್ಪರದಹಳ್ಳಿ ಗ್ರಾಮದ ಸ.ನಂ.4ಗಳಲ್ಲಿ ಕಂಪನಿಯ ವತಿಯಿಂದ ಫೆನ್ಸಿಂಗ್
ಹಾಕಲು ಹೋದಾಗ ಖಾತೆದಾರರು ಪ್ರತಿಭಟನೆ ನಡೆಸಿ ಫೆನ್ಸಿಂಗ್ ಹಾಕಲು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…