ಫಾರ್ಮಾ ಕಂಪನಿಯಲ್ಲಿ ಅಗ್ನಿ‌‌ ಅವಘಡ: ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಬಾಲಕ: ಬಾಲಕನಿಗೆ ಅಭಿನಂದನೆ ಸಲ್ಲಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ನಂದಿಗಮಾದಲ್ಲಿ ಫಾರ್ಮಾ ಕಂಪನಿಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಶೌರ್ಯ ಪ್ರದರ್ಶಿಸಿ ಆರು ಕಾರ್ಮಿಕರ ಪ್ರಾಣ ಉಳಿಸಿದ ಸಾಯಿಚರಣ್ ಅವರನ್ನು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿಶೇಷವಾಗಿ ಅಭಿನಂದಿಸಿದ್ದಾರೆ.

ಸಾಯಿ ಚರಣ್ ತನ್ನ ಪೋಷಕರೊಂದಿಗೆ ಸಿಎಂ ಅವರನ್ನು ಭೇಟಿಯಾದರು. ಕಾರ್ಮಿಕರ ರಕ್ಷಣೆಯಲ್ಲಿ ತೋರಿದ ಪ್ರಯತ್ನದ ವಿವರಗಳನ್ನು ಮುಖ್ಯಮಂತ್ರಿಗಳು ಕೇಳಿದರು.  ಬಾಲಕನ ಸಾಹಸಕ್ಕೆ ಮೆಚ್ಚಿದ ಸಿಎಂ ಹೂಗುಚ್ಛ ನೀಡಿ ಅಭಿನಂದಿಸಿದರು.

ಇದೇ ತಿಂಗಳ 26ರಂದು ಹೈದರಾಬಾದ್‌ನ ಉಪನಗರದಲ್ಲಿರುವ ಉದ್ಯಮವೊಂದರಲ್ಲಿ ಸಂಭವಿಸಿದ ಬೆಂಕಿಯಿಂದ ಸಾಯಿಚರಣ್ ಆರು ಮಂದಿಯನ್ನು ರಕ್ಷಿಸಿದ್ದರು. ಇತ್ತೀಚೆಗಷ್ಟೇ ಹತ್ತನೇ ತರಗತಿ ಮುಗಿಸಿದ 15 ವರ್ಷದ ಬಾಲಕ. ಸಾಯಿಚರಣ್ ಅವರು ರಂಗಾರೆಡ್ಡಿ ಜಿಲ್ಲೆಯ ಶಾದ್ ನಗರ ಕ್ಷೇತ್ರದ ನಂದಿಗಮದಿಂದ ಬಂದವರು. ಸಾಯಿಚರಣ್ ಅವರ ಸಾಹಸಕ್ಕೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

17 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

17 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

23 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

24 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

2 days ago