ಫಾಸ್ಟ್‌ ಫುಡ್‌ ಆಹಾರ ತಯಾರಿಕಾ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಫಾಸ್ಟ್‌ ಫುಡ್‌ ಆಹಾರ ತಯಾರಿಕೆ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಆಗಸ್ಟ್‌ 10 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9113880324, 9740982585, 8884554510, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

1 hour ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

18 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

19 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 days ago