ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫಾಸ್ಟ್ ಫುಡ್ ತಯಾರಿಕಾ ಕುರಿತ 10 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…
ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…
ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆ ನಡೆಸಿದ ಸಭೆಯಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…