ಫಾಸ್ಟ್ ಫುಡ್‌ ತಯಾರಿಕಾ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫಾಸ್ಟ್ ಫುಡ್ ತಯಾರಿಕಾ ಕುರಿತ 10 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9380162042, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

4 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

16 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

20 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

23 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

1 day ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

2 days ago