ಫುಟ್ಬಾಲ್: ಒಂಬತ್ತನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟ ಭಾರತ ತಂಡ

ಬೆಂಗಳೂರು: ಕುವೈತ್ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಗಳಿಸುವ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಅಭಿಮಾನಿಗಳು ವಂದೇ ಮಾತರಂ ಗೀತೆಯನ್ನು ಹಾಡುತ್ತಾ ಸಂಭ್ರಮದ ಅಲೆಯಲ್ಲಿ ತೇಲುವಂತೆ ಮಾಡಿತು.

ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಕ್ಷಣ ಕ್ಷಣಕ್ಕೂ ರೋಚಕತೆ ಹೆಚ್ಚಾಗುತ್ತಿತ್ತು, ನಿಗಧಿತ ಸಮಯದಲ್ಲಿ ಕುವೈತ್ ತಂಡದ ಅಬೀಬ್ ಅಲ್ ಖಲೈದ್ ಒಂದು ಗೋಲು ಗಳಿಸುವ ಮೂಲಕ ತಂಡಕ್ಕೆ ಮುನ್ನಡೆ ದೊರಕಿಸಿಕೊಟ್ಟರು.

ನಂತರ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದ ಭಾರತ ತ್ವರಿತ ಪಾಸ್ ಗಳನ್ನು ನೀಡಿದರ ಫಲವಾಗಿ ಚಾಂಗ್ಟೆ ಗೋಲು ಗಳಿಸುವ ಮೂಲಕ ಎರಡು ತಂಡಗಳು ಸಮಬಲ ಸಾಧಿಸಿದರು.

 

ಹೆಚ್ಚುವರಿ ಸಮಯದಲ್ಲಿ ಅಂಪೈರ್ ಪೆನಾಲ್ಟಿ ಶೂಟೌಟ್ ಗೆ ಸೂಚಿಸಿದ್ದು ಉಭಯ ತಂಡಗಳಲ್ಲಿ ಭಾರತ 5-4 ಗೋಲುಗಳಿಂದ ಕುವೈತ್ ತಂಡವನ್ನು ಮಣಿಸಿ ಸುನೀಲ್ ಛೆಟ್ರಿ ಪಡೆ 9ನೇ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿತು.

ಭಾರತ ತಂಡ ರೋಚಕ ಜಯ ಗಳಿಸಿರುವುದಕ್ಕೆ ಪ್ರಧಾನಿ ಮೋದಿ ಸೇರಿದಂತೆ ಇತರರು ಅಭಿನಂದನೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

9 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

22 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

23 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago