ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಿದ್ದು, ಈ ವರ್ಷದ ಬೇಸಿಗೆಯು ಕಳೆದ ಬಾರಿಗಿಂತ ಕಠಿಣವಾಗಿರಬಹುದು ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಒಣಹವೆ ಎನ್ನಲಾಗಿದೆ.
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಫೆಬ್ರವರಿ ಆರಂಭದಲ್ಲಿಯೇ ಬಿಸಿಲಿನ ತಾಪಮಾನದ ವಾತಾವರಣ ಉಲ್ಬಣವಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ನಗರದಲ್ಲಿ ವಾಡಿಕೆಗಿಂತ ಅತ್ಯಧಿಕ ತಾಪಮಾನ ಕಂಡು ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸದ್ಯ ಕರ್ನಾಟಕದ ತುಂಬೆಲ್ಲ ಹವಾಮಾನದಲ್ಲಿ ಶಾಖದ ವಾತಾವರಣ ಉಂಟಾಗಿದೆ. ಫೆಬ್ರವರಿ ಆರಂಭದಿಂದಲೇ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಟಿದೆ. ಅದರಲ್ಲೂ ಮಧ್ಯಾಹ್ನ ಅವಧಿಯಲ್ಲಂತೂ ಉತ್ತರ ಕರ್ನಾಟಕದ ಜಿಲ್ಲೆಗಳಂತೆ ಭಾಸವಾಗುತ್ತಿದೆ. ಈ ತಿಂಗಳಾದ್ಯಂತ ಗರಿಷ್ಠ ತಾಪಮಾನವೇ ಆವರಿಸುವ ಲಕ್ಷಣಗಳು ಇವೆ.
ಬೆಂಗಳೂರು ನಗರ ಪ್ರದೇಶದಲ್ಲಿ ಗರಿಷ್ಠ 31.8 ಡಿ.ಸೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL) ಗರಿಷ್ಠ 31.8 ಡಿ.ಸೆ ಹಾಗೂ ಬೆಂಗಳೂರಿನ ಎಚ್‌ಎಎಲ್‌ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ 15ರಿಂದ 18 ಡಿ.ಸೆ ದಾಖಲಾಗುತ್ತಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲು ‘ಎಲ್ ನಿನೊ’ ಕಾರಣ ಎನ್ನಲಾಗಿದೆ.’ಪೂರ್ವ ಪೆಸಿಫಿಕ್ ಸಾಗರದಲ್ಲಿ ಮೇಲ್ಮೈ ನೀರಿನ ತಾಪಮಾನ ಏರಿಕೆಗೆ ಕಾರಣವಾಗುವ ಹವಾಮಾನ ಪರಿಸ್ಥಿತಿ’ ಅನ್ನು ‘ಎಲ್ ನಿನೊ’ ಎಂದು ಹವಾಮಾನ ಇಲಾಖೆ ಕರೆಯುತ್ತದೆ.
ಪ್ರತಿ ವರ್ಷ ಜಾಗತಿಕ ತಾಪಮಾನ ಏರಿಕೆಯ ಪರಿಣಾಮವು ರಾಜ್ಯದ ಮೇಲೂ ಆಗುತ್ತದೆ. ಇದರಿಂದಾಗಿ ಜನರು ಸಾಮಾನ್ಯಕ್ಕಿಂತ ಬಿಸಿಯಾದ ವಾತಾವರಣ ಎದುರಿಸುತ್ತಾರೆ. ಹಲವೆಡೆ ಹೀಟ್ ವೇ ನಿಂದಲೇ ಪ್ರಾಣ ಕಳೆದಕೊಂಡ ಉದಾಹರಣೆಗಳು ಇವೆ.
ಫೆಬ್ರವರಿ ತಿಂಗಳು ಚಳಿಗಾಲವಾದರೂ ಸಹಿತ ‘ಎಲ್ ನಿನೊ’ ಪರಿಣಾಮವು ತಾಪಮಾನವನ್ನು ಹೆಚ್ಚಿಸುತ್ತಿದೆ. ಮಾರ್ಚ್ ತಿಂಗಳ ಬಳಿಕ ಅದು ಕಡಿಮೆ ಆಗುತ್ತದೆ ಎಂಬ ನಿರೀಕ್ಷೆಗಳು ಇತ್ತು. ಇದೀಗ ಮಾರ್ಚ್ ನಂತರವು ಅದರ ಪ್ರಭಾವ ಕಡಿಮೆ ಆಗುವ ಲಕ್ಷಣಗಳು ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಪ್ರತಿ ವರ್ಷದಿಂದ ವರ್ಷಕ್ಕೆ ಬೇಸಿಗೆ ಶಾಖ, ಒಣ ಹವೆ ಹೆಚ್ಚಾಗುತ್ತಿದೆ. ಅದೇ ರೀತಿ ಈ ವರ್ಷವು ಬೇಸಿಗೆಯು ಮತ್ತಷ್ಟು ಕಠಿಣವಾಗುವ ಸಾಧ್ಯತೆ ಇದೆ. ಮಾರ್ಚ್ ಆರಂಭದಲ್ಲಿ ಕರಾವಳಿ ಕರ್ನಾಟಕದಲ್ಲಿ ಬಿಸಿಗಾಳಿಯ ವಾತಾವರಣ ಉಂಟಾಗಲಿದೆ.
ರಾಜ್ಯದಲ್ಲಿ ಮುಂದಿನ ಒಂದು ವಾರ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನ ಏರಿಕೆ ಆಗುತ್ತದೆ ಎಂದು ವರದಿ ತಿಳಿಸಿದೆ.
ಒಟ್ಟಾರೆ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಫೆಬ್ರವರಿ ಸೇರಿದಂತೆ ಇಡೀ ಬೇಸಿಗೆಯೇ ಅಧಿಕ ಶಾಖದ ಸ್ಥಿತಿ ನಿರ್ಮಾಣವಾಗಲಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…