ಫೆ. 10 ಮತ್ತು 11ರಂದು ಶ್ರೀ ಚೌಡೇಶ್ವರಿ ದೇವಸ್ಥಾನದ ಮೊದಲನೇ ವರ್ಷದ ವಾರ್ಷಿಕೋತ್ಸವ

ಶ್ರೀ ಚೌಡೇಶ್ವರಮ್ಮ ದೇವಿ ಜೀರ್ಣೋದ್ಧಾರ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ತಾಲೂಕಿನ ಹಾಡೋನಹಳ್ಳಿಯಲ್ಲಿ ಫೆ 10 ಮತ್ತು 11ರಂದು ಶ್ರೀ ಚೌಡೇಶ್ವರಿ ದೇವಸ್ಥಾನದ ಮೊದಲನೇ ವರ್ಷದ ವಾರ್ಷಿಕೋತ್ಸವ ನಡೆಯಲಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅಪ್ಪಯ್ಯಣ್ಣ ತಿಳಿಸಿದರು.

ಫೆ.10ರಂದು 9ಗಂಟೆಗೆ ಲೋಕಕಲ್ಯಾಣಾರ್ಥವಾಗಿ 108 ಸುಮಂಗಲಿಯರಿಂದ ಕುಂಕುಮಾರ್ಚನೆ ನಡೆಯಲಿದೆ. ನಂತರ ಮಹಾಮಂಗಳಾರತಿ ಪಾರ್ವತಿ ಪರಮೇಶ್ವರ ಕಲ್ಯಾಣೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ ಎಂದರು.

ಫೆ.11ರಂದು 8ಗಂಟೆ ಸಮಯದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಚಿಕ್ಕಬಳ್ಳಾಪುರ ಶಾಖಾ‌ ಮಠದ ಶ್ರೀ ಮಂಗಳನಂದಗಿರಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ ಎಂದರು.

ನವದುರ್ಗ ಹೋಮ, ಮಹಾಪೂರ್ಣಾಹುತಿ, ಚನ್ನಕೇಶವ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ, ಅಧ್ಯಕ್ಷತೆಯನ್ನು ಟ್ರಸ್ಟ್ ನ ಅಧ್ಯಕ್ಷರು ವಹಿಸಲಿದ್ದಾರೆ ಎಂದರು.

ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಕ್ತ ಮಹಾಶಯರು ಆಗಮಿಸಿ ತನು, ಮನ, ಧನ, ಧಾನ್ಯಾದಿಗಳನ್ನು ಅರ್ಪಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿದೆ ಎಂದು ಕೋರಿದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

4 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

4 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

5 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

12 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

13 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

16 hours ago