ಫೆ.12 ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ- ಜೆಸಿಟಿಯು, ಎಸ್ ಎಚ್ ಕೆ

ವ್ಯಾಪಾರದ ಸುಲಭೀಕರಿಸಲು. ಯೂನಿಯನ್ ಮುಕ್ತ ವಾತಾವರಣ ನಿರ್ಮಿಸಲಿಕ್ಕಾಗಿ, 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ 4 ಕಾರ್ಮಿಕ ಸಂಹಿತೆಗಳನ್ನು ಜಾರಿ ಮಾಡಿರುವುದು ಕೇವಲ ಆರ್ಥಿಕ ದಾಳಿ ಮಾತ್ರವಲ್ಲದೆ ರಾಜಕೀಯ ದಾಳಿಯೂ ಆಗಿದೆ. ಕಾರ್ಖಾನೆಗಳ ವ್ಯಾಖ್ಯಾನದಲ್ಲಿ ಕಾರ್ಮಿಕರ ಮಿತಿ ಹೆಚ್ಚಳದಿಂದ, ಗುತ್ತಿಗೆ ಕಾರ್ಮಿಕರ ಲೈಸೆನ್ಸಗಳಿಗೆ ಕಾರ್ಮಿಕರ ಮಿತಿ ಹೆಚ್ಚಳದಿಂದಾಗಿ 90% ಕಾರ್ಮಿಕರಿಗೆ ವೇತನ, ESI, PF ಗ್ರಾಚ್ಯುಟಿ, ಭೋನಸ್ ಹಕ್ಕುಗಳಿಂದ ಹೊರಗುಳಿಯುತ್ತಾರೆ ಎಂದು ಜೆಸಿಟಿಯು, ಎಸ್ ಎಚ್ ಕೆ ಮುಖಂಡರು ಹೇಳಿದರು.

ಇಂದು ನಗರದ ಪ್ರವಾಸಿ ಮಂದಿರದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಸಂಯುಕ್ತ ಹೋರಾಟ ಕರ್ನಾಟಕ (SHK) ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜೀವನೋಪಾಯ ವೇತನದ ಜಾರಿಯ ಪ್ರಸ್ತಾಪವಿಲ್ಲ ಕನಿಷ್ಠ ವೇತನ ಅಥವಾ ರಾಷ್ಟ್ರೀಯ ಸರಾಸರಿ ವೇತನದ ಖಾತ್ರಿಯ ಬದಲಿಗೆ ತಳಹಂತದ 178 ರೂ. ಕೂಲಿಯನ್ನು ಹೊಸದಾಗಿ ಪರಿಷ್ಕರಿಸಲಾಗಿದೆ. ಇನ್ನು ಯಾವುದೇ ವಲಯದ ವೇತನಗಳ ಹೆಚ್ಚಳಕ್ಕೆ ಆಧಾರವಿಲ್ಲದಂತೆ ಮಾಡಲಾಗಿದೆ. ಈಗಾಗಲೇ ಮಾಲೀಕರ ಹೆಚ್ಚುವರಿ ಮೌಲ್ಯ 23.39% ರಿಂದ 51.01% ಗೆ ಹೆಚ್ಚಳವಾಗಿದೆ. ಕಾರ್ಮಿಕರ ವೇತನದ ಪಾಲು 30.27% ರಿಂದ 15.97% ಗೆ ಇಳಿದಿದೆ. ಕಾರ್ಮಿಕರಿಂದ ಪ್ರಾಥಃಮಿಕವಾಗಿ ಸಂಘ ರಚಿಸಿಕೊಳ್ಳುವ ಹಕ್ಕುಗಳನ್ನು ನಿರ್ಬಂಧಿಸಲಾಗಿದೆ ಎಂದರು.

ಸಹಜವಾಗಿ ಚುನಾಯಿಸಲ್ಪಟ್ಟ ಸಂಘದೊಂದಿಗೆ ಕುಂದುಕೊರತೆಗಳ ಸಮಿತಿಯನ್ನು ಮಾಡುವ ಮುಖಾಂತರ ಸಾಮೂಹಿಕ ಚೌಕಾಸಿಯನ್ನು ಶಕ್ತಿಯನ್ನು ಕಡಿಮೆ ಮಾಡುಲಾಗಿದೆ. ಮಾತ್ರವಲ್ಲದೆ ಹಕ್ಕೊತ್ತಾಯಗಳು ಈಡೇರದೇ ಇದ್ದಾಗ ಮಾಡುತ್ತಿದ್ದ ಮುಷ್ಕರವನ್ನು ಮಾಡಿದರೆ ಅದಕ್ಕೆ ದಂಡ, ಜೈಲು, ಮತ್ತು ಅನಿರ್ಧಿಷ್ಟ ವೇತನ ಕಡಿತ ಮಾಡಲಾಗುತ್ತದೆ. 300ಕ್ಕಿಂತ ಹೆಚ್ಚು ಕಾರ್ಮಿಕರಿರುವ ಕಾರ್ಖಾನೆಗಳು ಮಾತ್ರವೇ ಸ್ಥಾಯಿ ಆದೇಶಗಳಿರುತ್ತವೆ. ಎಂದು ಹೇಳಿದರು..

ಬಂಡವಾಳಗಾರರ ಹಿತಕಾಯಲು ಮತ್ತು ಬಂಡವಾಳಗಾರರ ಸಂಪತ್ತುನ್ನು ರಕ್ಷಿಸಲು ಪ್ರಭುತ್ವಗಳು ಟೊಂಕ ಕಟ್ಟಿ ಅನುವು ಮಾಡಿ ಕೊಟ್ಟಿದ್ದಾರೆ. ನರೇಗಾ ಕಾಯ್ದೆಯಡಿಯಲ್ಲಿ ಖಾತರಿ ಪಡಿಸಲಾದ ಕೆಲಸ. ಕೆಲಸದ ಹಕ್ಕನ್ನು ಕಸಿದುಕೊಳ್ಳುವುದರ ಜೊತೆಗೆ ಗ್ರಾಮೀಣ ಶ್ರಮ ಜೀವಿಗಳ ಕೊಂಡುಕೊಳ್ಳುವ ಸಾಮಾರ್ಥ್ಯ ಕಡಿಮೆ ಮಾಡುವುದು ಮತ್ತು ಕೃಷಿ ಕಾರ್ಮಿಕರ ಮತ್ತು ಇತರೆ ಗ್ರಾಮೀಣ ಕಾರ್ಮಿಕರ ವೇತನವನ್ನು ನಿಗ್ರಹಿಸುತ್ತಿದೆ ಎಂದರು.

ವಿದ್ಯುತ್ ಶಕ್ತಿಯನ್ನು ಖಾಸಗೀಕರಿಸಿ ವಿದ್ಯುತ್ ಪ್ರಸರಣ, ವಿತರಣಾ ವ್ಯವಸ್ಥೆಯ ಅನುಷ್ಠಾನ ಮತ್ತು ನಿರ್ವಹಣೆಯನ್ನು ಖಾಸಗಿ ಬಂಡವಾಳಗಾರರಿಗೆ ಕೊಡುವ ಮುಖಾಂತರ ಇದುವರೆಗೂ ವಿದ್ಯುತ್ ರೈತರಿಗೆ ಮತ್ತು ಜನಸಾಮಾನ್ಯರಿಗೆ ಸಬ್ಸಿಡಿ ದರದಲ್ಲಿ ಸಿಗುತ್ತಿದ್ದ ಪ್ರಮುಖ ಸೇವೆಯಿಂದ ಸರ್ಕಾರ ತನ್ನ ಸಾಮಾಜಿಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದೆ. ರೈತರು ಬೆಳೆಯುವ ಬೆಳೆಗಳಿಗೆ ಬೆಂಬಲ ಬೆಲೆ ನೀಡದೇ, ಕಂಪನಿ ಕೃಷಿಯನ್ನು ಉತ್ತೇಜಿಸಿ ಬಲವಂತದ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದು ರೈತರ ಭೂಮಿಯನ್ನು ವಶಪಡಿಕೊಳ್ಳುತ್ತಿದೆ. ಇದರಿಂದ ರೈತರು ಕೂಲಿಕಾರರಾಗಿ ಮತ್ತು ನಿರುದ್ಯೋಗಸ್ಥರಾಗಿ ಮಾರ್ಪಾಡಾಗುತ್ತಿದ್ದಾರೆ. 1 ಫೆಬ್ರವರಿ 2026 ರಂದು ಕೇಂದ್ರ ಸರ್ಕಾರ 53.5 ಲಕ್ಷಕೋಟಿ ಬಜೆಟನ್ನು ಮಂಡಿಸಲಾಗಿದೆ. ಆದರೆ ಇದರಲ್ಲಿ ಜನಸಾಮಾನ್ಯರು ಅನುಭವಿಸುವ ಸಂಕಷ್ಟಗಳಿಗೆ ಪರಿಹಾರವಿಲ್ಲ ಬದಲಿಗೆ ಬಂಡವಾಳಗಾರರಿಗೆ ಹಸೆಮಣೆ ಹಾಕಲಾಗಿದೆ ಎಂದರು.

ರಾಜ್ಯ ಸರ್ಕಾರ ಈ ಕೋಡ್ಗಳಿಗೆ ನಿಯಮಾವಳಿ ರಚಿಸಬಾರದೆಂದೂ ಒತ್ತಾಯಿಸಿದರೂ ಕೂಡಾ ಕಾರ್ಮಿಕರ ಸಂಘಟನೆಗಳ ಬಳಿ ಕನಿಷ್ಠ ಚರ್ಚೆ ಮಾಡುವ ಸೌಜನ್ಯವನ್ನು ನೋಡಿಸದೇ 4 ಕೋಡ್ ಗಳಿಗೆ ಗೆಜೆಟ್ ನೋಟಿಫಿಕೇಷನ್ ತಂದು ಕಾರ್ಮಿಕರು ಉಸಿರೆತ್ತದಂತಹ ಪರಿಸ್ಥಿತಿಯನ್ನು ನಿರ್ಮಿಸುತ್ತಿದೆ. 2025 ಆಗಸ್ಟ್ ತಿಂಗಳಲ್ಲಿ ಕನಿಷ್ಠ ವೇತನದ ಮಂಡಳಿಯಿಂದ ಶಿಫಾದಸ್ಥಾದ ಕನಿಷ್ಠ ವೇತನವನ್ನು ಈಗ 1948ರ ಕನಿಷ್ಠ ವೇತನ ಕಾಯ್ದೆ ರದ್ದಾದ ಹಿನ್ನಲೆಯನ್ನು ಕಾನೂನು ಇಲಾಖೆಯ ಅಭಿಪ್ರಾಯ ಪಡೆಯುವುದಾಗಿ ಹಿಂಬರಹ ಕೊಡುವ ಮುಖಾಂತರ ರಾಜ್ಯದ ಅಧಿಕಾರವನ್ನು ಕಾರ್ಮಿಕರ ಹಿತಾಸಕ್ತಿ ಕಾಪಾಡಲು ಬಳಸುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ. ನುಡಿದಂತೆ ನಡೆಯುತ್ತೀವೆ ಎಂದು ಹೇಳುವ ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆಗಳನ್ನು ಮುಂದುವರೆಸುತ್ತಿದೆ ಎಂದು ತಿಳಿಸಿದರು.

ಈ ನೀತಿಯನ್ನು ವಿರೋಧಿಸಿ, ಫೆಬ್ರವರಿ 12 ರಂದು ರಾಜ್ಯದಲ್ಲಿ ಕೇಂದ್ರ ಮತ್ತು ಸ್ವತಂತ್ರ ಕಾರ್ಮಿಕ ಸಂಘಗಳು ಎಲ್ಲಾ ರೈತ ಸಂಘಗಳು, ಕೂಲಿಕಾರ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ ಸಂಘಟನೆಗಳು, ಮಹಿಳಾ ಸಂಘಟನೆಗಳು ಮತ್ತು ವಿದ್ಯಾರ್ಥಿ-ಯುವಜನ ಸಂಘಟನೆಗಳು ಸೇರಿ ಮುಷ್ಕರ ನಡೆಸಲಾಗುತ್ತಿದೆ. ಅಂದು ಎಲ್ಲಾ ವಿಭಾಗದ ಜನತೆ ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಬೇಕಾಗಿ ಎಂದರು.

ಉತ್ಪಾದನೆ, ಸೇವೆ ಸ್ಥಗಿತಗೊಳಿಸಿ ಕಾರ್ಮಿಕರ, ರೈತರ ಮತ್ತು ಕೃಷಿ ಕೂಲಿಕಾರರ ಮತು ತಮ್ಮ ವ್ಯಾಪಾರ ವಹಿವಾಟುಗಳನ್ನು ಸ್ವಯಂ ಪ್ರೇರಿತ ತಮ್ಮ ಕಾರ್ಯಚಟುವಟಿಕೆಗಳನ್ನು ನಿಲ್ಲಿಸಬೇಕೆಂದೂ ಈ ಮೂಲಕ ವಿನಂತಿಸುತ್ತೇವೆ ಎಂದು ಹೇಳಿದರು.

ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳು

1. 4 ಲೇಬರ್ ಕೋಡ್ ರದ್ದುಗೊಳಿಸಿ.

2. ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಿ.

3. ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ.

4. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ ಕಾಯ್ದೆ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು.

5. ವಿದ್ಯುಚ್ಛಕ್ತಿ ಖಾಸಗೀಕರಣ ಬೇಡಾ.

6. ಬೀಜ ಮಸೂದೆ ಕಾಯ್ದೆಯನ್ನ ಹಿಂಪಡೆಯಬೇಕು,

7. ವಿಮಾ ತಿದ್ದುಪಡಿ ಕಾಯ್ದೆ. ಶಾಂತಿ ಕಾಯ್ದೆ ರದ್ದುಗೊಳಿಸಿ.

8 ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್ನನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಬೇಕು.

9. 2025 ಆಗಸ್ಟ್ ತಿಂಗಳಲ್ಲಿ ಕನಿಷ್ಠ ವೇತನ ಹೆಚ್ಚಳದ ಕುರಿತು ಕನಿಷ್ಠ ವೇತನ ಸಲಹಾ ಮಂಡಳಿ ನೀಡಿರುವ ಶಿಫಾರಸ್ಸುನ್ನು ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು.

ಪತ್ರಿಕಾಗೋಷ್ಠಿಯಲ್ಲಿ ಜೆಸಿಟಿಯು ಜಿಲ್ಲಾ ಸಂಚಾಲಕರು ಮತ್ತು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಎ.ವೆಂಕಟೇಶ್, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಆರ್ ಚಂದ್ರತೇಜಸ್ವಿ, ಕನ್ನಡ ಪಕ್ಷದ ರಾಜ್ಯ ಮುಖಂಡ ಸಂಜೀವ್ ನಾಯಕ್, ಪ್ರಜಾ ವಿಮೋಚನಾ ಚಳುವಳಿ ಮುಖಂಡ ಗೂಳ್ಯ ಹನುಮಣ್ಣ, ಸಿಐಟಿಯು ಜಿಲ್ಲಾ ಖಜಾಂಚಿ ಎಚ್ಎನ್ ಮೋಹನ್ ಬಾಬು, ಕೆಐಇಇಎಫ್ ಕಾರ್ಮಿಕ ಸಂಘದ ಮುಖಂಡ ಪ್ರಭಾಕರ್, ಕರ್ನಾಟಕ ರಾಜ್ಯ ರೈತ ಸಂಘದ ಮುತ್ತೇಗೌಡ, ನಾರಾಯಣಪ್ಪ, ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ನಂಜಪ್ಪ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ ) ಎಚ್ಎಸ್ ವೆಂಕಟೇಶ್, ಬಿರ್ಲಾ ಸೂಪರ್ ಕಾರ್ಮಿಕ ಸಂಘದ ಮುಖಂಡ ರೇಣುಕಾರಾಧ್ಯ, ಅನಿಲ್ ಗುಪ್ತ, ಬೀರೇಂದ್ರ ಗುಪ್ತ, ಆಟೋ ಚಾಲಕರ ಸಂಘದ ಅಧ್ಯಕ್ಷ ಸಾಧಿಕ್ ಪಾಷಾ, ಶಿವರಾಜ್ ಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್, ಡಾ. ರಾಜಕುಮಾರ್ ಕನ್ನಡ ಅಭಿಮಾನಿಗಳ ಸಂಘದ ಆರ್ ಎಂ ಮಹದೇವಯ್ಯ, ಡಿಎಸ್ಎಸ್ ಸಂಚಾಲಕರಾದ ಸುರೇಶ್, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರಾದಸಿ ಎಚ್ ರಾಮಕೃಷ್ಣಯ್ಯ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!