ಫೆ. 12 ರಿಂದ ಮೇಕೆ ಸಾಕಾಣಿಕೆ ಉಚಿತ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೇಕೆ, ಆಡು ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯು ಫೆಬ್ರವರಿ 12 ರಿಂದ 21 ರವರೆಗೆ 10 ದಿನಗಳ ಕಾಲ ಆಯೋಜಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್‌ ಕಾರ್ಡ್‌ನ್ನು ಹೊಂದಿರಬೇಕು ಹಾಗೂ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಫೆಬ್ರವರಿ 11 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 8884554510, 9740982585, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

3 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

5 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

8 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

13 hours ago

ಉಪರಾಷ್ಟ್ರಪತಿ‌ ಚುನಾವಣೆ: ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರಿಗೆ ಭರ್ಜರಿ ಗೆಲುವು

ಮಂಗಳವಾರ ನಡೆದ ಉಪರಾಷ್ಟ್ರಪತಿ‌ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…

24 hours ago

40 ಕೋಟಿ ಮೌಲ್ಯದ 6 ಎಕರೆ ಸರ್ಕಾರಿ ಆಸ್ತಿ ಸರ್ಕಾರದ ವಶ: ಡಿಸಿ ಕ್ರಮಕ್ಕೆ ಪ್ರಬುದ್ಧ ಕರ್ನಾಟಕ ಭೀಮ ಸೇನೆ ಅಭಿನಂದನೆ ಸಲ್ಲಿಕೆ

ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…

1 day ago