ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಫೆಬ್ರವರಿ 12 ರ ಸೋಮವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಕೊಠಡಿ ಸಂಖ್ಯೆ:03, ಜಿಲ್ಲಾಡಳಿತ ಭವನ, ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು ಇಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಕಲಚೇತನರ ಕುಂದು ಕೊರತೆಗಳನ್ನು ನಿವಾರಿಸಲು “ಜಿಲ್ಲಾ ಮಟ್ಟದ ವಿಕಲಚೇತನರ ಕುಂದು ಕೊರತೆ ಸಭೆ” ಯನ್ನು ನಡೆಸಲು ಉದ್ದೇಶಿಸಲಾಗಿದೆ.
ಜಿಲ್ಲೆಯ ವಿಕಲಚೇತನರು ಕುಂದು ಕೊರತೆಗಳಿದ್ದಲ್ಲಿ ಲಿಖಿತವಾಗಿ ಅಹವಾಲು ಸಲ್ಲಿಸಿದ್ದಲ್ಲಿ, ಅತೀ ಶೀಘ್ರದಲ್ಲಿ ನಿಯಮಾನುಸಾರ ಸೌಲಭ್ಯಗಳನ್ನು ದೊರಕಿಸಲು ಕ್ರಮ ವಹಿಸಲಾಗುವುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್. ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.