ದೊಡ್ಡಬಳ್ಳಾಪುರ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಸುವ ಉದ್ದೇಶದಿಂದ ಫೆ.20ರಿಂದ ಮೂರು ದಿನಗಳ ಕಾಲ “ದೊಡ್ಡಬಳ್ಳಾಪುರ ಸೀರೆ ಸಂತೆ” ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಹೇಳಿದರು..
ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರು, ನೇಕಾರರು ದೇಶದ ಎರಡು ಕಣ್ಣುಗಳು. ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆಯೂ ಹೆಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಎಂಬ ಬಿರುದು ಅನಾದಿ ಕಾಲದಿಂದಲೂ ಇದೆ ಎಂದರು.
ಪ್ರಸ್ತುತ ನೇಕಾರರ ಜೀವನ ಅಸ್ತವ್ಯಸ್ತವಾಗುತ್ತಿದೆ. ಬಂಡವಾಳಶಾಹಿಗಳಿಂದ ನೇಕಾರರಿಗೆ ತೊಂದರೆ ಆಗುತ್ತಿದೆ. ಎಲ್ಲರಿಗೂ ಅದರಲ್ಲೂ ಬೆಂಗಳೂರಿನ ಜನತಗೆ ದೊಡ್ಡಬಳ್ಳಾಪುರ ಸೀರೆ ಪರಿಚಯ ಮಾಡಬೇಕು. ಫೆ.22ರಂದು ಕೊಂಗಾಡಿಯಪ್ಪ ಜನ್ಮದಿನದ ಅಂಗವಾಗಿ ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶವಿದೆ, ಮಹಿಳೆಯರಿಗೆ ಸೀರೆ ಎನ್ನುವುದು ಕೇವಲ ವಸ್ತುವಲ್ಲ, ಮಹಿಳೆಯರ ಭಾವನಾತ್ಮಕ ವಸ್ತು ಆಗಿದೆ. ಇಲ್ಲಿನ ಸೀರೆಗಳಿಗೆ ಬ್ರ್ಯಾಂಡ್ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇಡಲಾಗುತ್ತದೆ. ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಹೇಳಿದರು..
ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ, ಸಂಗೀತ, ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವೇದಿಕೆಯಲ್ಕಿ ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು.
ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಸೀರೆ ಸಂತೆ ಸಮಿತಿಯ ಗೌರವ ಅಧ್ಯಕ್ಷ ಎಂಜಿ ಶ್ರೀನಿವಾಸ, ಅಧ್ಯಕ್ಷ ಪಿಸಿ ವೆಂಕಟೇಶ್, ಹಿರಿಯ ಮುಖಂಡ ಕೆಎಂ ಹನುಮಂತರಾಯಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪುಷ್ಪಶಿವಶಂಕರ್, ಡಿ.ಎಂ ಚಂದ್ರಶೇಖರ್, ಬಿಸಿ ನಾರಾಯಣಸ್ವಾಮಿ, ಬಂತಿ ವೆಂಕಟೇಶ, ಸಿ ನಾರಾಯಣಸ್ವಾಮಿ, ನಾಗೇಶ್, ಮುದ್ದಪ್ಪ, ಗೋಪಿ, ಜಗದೀಶ್ ಇತರರು ಇದ್ದರು.
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…