ಫೆ.20, 21, 22ರವರೆಗೆ “ದೊಡ್ಡಬಳ್ಳಾಪುರ ಸೀರೆ ಸಂತೆ”-ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ಸೀರೆಗಳಿಗೆ ಬ್ರ್ಯಾಂಡ್ ಸೃಷ್ಟಿಸುವ ಉದ್ದೇಶದಿಂದ ಫೆ.20ರಿಂದ ಮೂರು ದಿನಗಳ ಕಾಲ “ದೊಡ್ಡಬಳ್ಳಾಪುರ ಸೀರೆ ಸಂತೆ” ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಧೀರಜ್ ಮುನಿರಾಜ್ ಅವರು ಹೇಳಿದರು..

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರೈತರು, ನೇಕಾರರು ದೇಶದ ಎರಡು ಕಣ್ಣುಗಳು. ದೊಡ್ಡಬಳ್ಳಾಪುರದಲ್ಲಿ ನೇಕಾರಿಕೆಯೂ ಹೆಮ್ಮೆಯ ಕುಲಕಸುಬುಗಳಾಗಿವೆ. ದೊಡ್ಡಬಳ್ಳಾಪುರಕ್ಕೆ ಮ್ಯಾಂಚೆಸ್ಟರ್ ಆಫ್ ಇಂಡಿಯಾ ಎಂಬ ಬಿರುದು ಅನಾದಿ ಕಾಲದಿಂದಲೂ ಇದೆ ಎಂದರು.

ಪ್ರಸ್ತುತ ನೇಕಾರರ ಜೀವನ ಅಸ್ತವ್ಯಸ್ತವಾಗುತ್ತಿದೆ. ಬಂಡವಾಳಶಾಹಿಗಳಿಂದ ನೇಕಾರರಿಗೆ ತೊಂದರೆ ಆಗುತ್ತಿದೆ. ಎಲ್ಲರಿಗೂ ಅದರಲ್ಲೂ ಬೆಂಗಳೂರಿನ ಜನತಗೆ ದೊಡ್ಡಬಳ್ಳಾಪುರ ಸೀರೆ ಪರಿಚಯ ಮಾಡಬೇಕು‌‌. ಫೆ.22ರಂದು ಕೊಂಗಾಡಿಯಪ್ಪ ಜನ್ಮದಿನದ ಅಂಗವಾಗಿ ದೊಡ್ಡಬಳ್ಳಾಪುರ ಸೀರೆಗಳ ವೈಶಿಷ್ಟ್ಯಗಳ ಬಗ್ಗೆ ಪರಿಚಯ ಮಾಡುವ ಉದ್ದೇಶವಿದೆ, ಮಹಿಳೆಯರಿಗೆ ಸೀರೆ ಎನ್ನುವುದು ಕೇವಲ ವಸ್ತುವಲ್ಲ, ಮಹಿಳೆಯರ ಭಾವನಾತ್ಮಕ ವಸ್ತು ಆಗಿದೆ. ಇಲ್ಲಿನ ಸೀರೆಗಳಿಗೆ ಬ್ರ್ಯಾಂಡ್ ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು 54 ಸೀರೆ ಮಳಿಗೆಗಳನ್ನು ಇಡಲಾಗುತ್ತದೆ. ಉತ್ತಮ ಸೀರೆಗಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಉದ್ಘಾಟನಾ ಕಾರ್ಯಕ್ರಮಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ವಿನ್ನರ್ ಗಿಲ್ಲಿ ನಟ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸೀರೆ ಸಂತೆ ಕಾರ್ಯಕ್ರಮದಲ್ಲಿ ಯಾವುದೇ ಶುಲ್ಕ ಇರುವುದಿಲ್ಲ. ಮಳಿಗೆಗಳಲ್ಲಿ ದೊಡ್ಡಬಳ್ಳಾಪುರದಲ್ಲೇ ನೇಯ್ದಿರುವ ಸೀರೆಗಳನ್ನು ಮಾತ್ರ ಪ್ರದರ್ಶನಕ್ಕೆ ಇಡಲು ಅವಕಾಶ ಕಲ್ಪಿಸಲಾಗಿದೆ. ಮಳಿಗೆಗಳನ್ನು ಇಡಲು ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಹೇಳಿದರು..

ಮೂರು ದಿನ ವಿವಿಧ ಕಲಾ ತಂಡಗಳಿಂದ ನಗೆ, ಸಂಗೀತ, ಕಾರ್ಯಕ್ರಮ, ನೃತ್ಯ ಕಾರ್ಯಕ್ರಮ, ರಸ ಮಂಜರಿ, ಮಕ್ಕಳ ಫ್ಯಾಷನ್ ಶೋ ಕಾರ್ಯಕ್ರಮ ಸೇರಿದಂತೆ ಇತರೆ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವೇದಿಕೆಯಲ್ಕಿ ಗಿಲ್ಲಿ ನಟ, ಪ್ರಾಣೇಶ್, ರಘು ದೀಕ್ಷಿತ್, ಕಾಮಿಡಿ ಕಿಲಾಡಿಗಳು ಶೋ ನ ಕಲಾವಿದರು ಸೇರಿದಂತೆ ಇತರರು ಮನರಂಜನೆ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ ಎಂದರು.

ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಸೀರೆ ಸಂತೆ ಸಮಿತಿಯ ಗೌರವ ಅಧ್ಯಕ್ಷ ಎಂಜಿ ಶ್ರೀನಿವಾಸ, ಅಧ್ಯಕ್ಷ ಪಿಸಿ ವೆಂಕಟೇಶ್, ಹಿರಿಯ ಮುಖಂಡ ಕೆಎಂ ಹನುಮಂತರಾಯಪ್ಪ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪುಷ್ಪಶಿವಶಂಕರ್, ಡಿ.ಎಂ ಚಂದ್ರಶೇಖರ್, ಬಿಸಿ ನಾರಾಯಣಸ್ವಾಮಿ, ಬಂತಿ ವೆಂಕಟೇಶ, ಸಿ ನಾರಾಯಣಸ್ವಾಮಿ, ನಾಗೇಶ್, ಮುದ್ದಪ್ಪ, ಗೋಪಿ, ಜಗದೀಶ್ ಇತರರು ಇದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

12 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

13 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

15 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

16 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

17 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

23 hours ago